ನಾಳೆ(ಜ.5) ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ಸೂಕ್ತ ಪೊಲೀಸ್ ಬಂದೋಬಸ್ತ್, ಸಾರಿಗೆ ವ್ಯವಸ್ಥೆ: ಸಿಸಿ ಕ್ಯಾಮೆರಾ: ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಊಟದ ವ್ಯವಸ್ಥೆ ಸಿದ್ಧತೆ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ ಶ್ರೀ ಕ್ರೋಧಿನಾಮ ಸಂವತ್ಸರದ ಪುಷ್ಯ ಶುದ್ಧ ಷಷ್ಠಿ ಜ.5ರ ಭಾನುವಾರ ಮಧ್ಯಾಹ್ನ 12-10 ರಿಂದ 12-20 ಗಂಟೆಗೆ ಸಲ್ಲುವ ಶುಭ (ಮೀನ) ಲಗ್ನದಲ್ಲಿ ಅಭಿಜಿನ್ ಮುಹೂರ್ತದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಜರುಗಲಿದೆ.

ಪ್ರತಿವರ್ಷದಂತೆ ಈ ವರ್ಷವೂ ಸಹ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ, ಯಶಸ್ವಿಯಾಗಿ, ಶ್ರದ್ಧಾಭಕ್ತಿಯಿಂದ ನೆರವೇರಿಸಲು ಈಗಾಗಲೇ ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ.

ಬ್ರಹ್ಮರಥೋತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನ ಬರಲಿದ್ದಾರೆ. ಬ್ರಹ್ಮರಥೋತ್ಸವ ವೇಳೆ ಯಾವುದೇ ಅಪಘಾತ, ಅನಾಹುತ, ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

ಅದರಂತೆ ಭಕ್ತಾಧಿಗಳ ಸಂಚಾರಕ್ಕೆ ದೊಡ್ಡಬಳ್ಳಾಪುರ ಕೆಎಸ್ ಆರ್ ಟಿಸಿ ಘಟಕದ ವತಿಯಿಂದ ಸುಮಾರು 75 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಜನಸಂದಣಿಯಲ್ಲಿ ಜನರ ಚಲನವಲನ ಗಮನಹರಿಸಲು ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ದೇವಸ್ಥಾನ ಸುತ್ತಾಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ವಾಹನಗಳ ನಿಲುಗಡೆಗೆ ಮಾಕಳಿ ಕಡೆಯಿಂದ ಬರುವ ವಾಹನಗಳಿಗೆ ದೇವಸ್ಥಾನ ಹಿಂಭಾಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಂಟನಕುಂಟೆ, ಹಾಡೋನಹಳ್ಳಿ ಮಾರ್ಗವಾಗಿ ಬರುವ ವಾಹನಗಳಿಗೆ ಲಘುಮೇನಹಳ್ಳಿ ಗೇಟ್ ಸಮೀಪ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಅನುಮತಿ ಇರುವುದಿಲ್ಲ.

ಜನಸಂದಣಿಯಲ್ಲಿ ತಲೆ ಸುತ್ತು, ಇತರೆ ತೊಂದರೆಗಳು ಉಂಟಾದರೆ ವೈದ್ಯಕೀಯ ಸೇವೆ ಕಲ್ಪಿಸಲು ದೇವಸ್ಥಾನ ಬಳಿ ವೈದ್ಯರ ತಂಡ ಇರಲಿದೆ‌. ಎರಡು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ, ವೈದ್ಯರ ತಂಡದೊಂದಿಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಅವಕಾಶ ಮಾಡಲಾಗಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

12 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

22 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago