
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ 5ನೇ ವಾರ್ಡ್ ಅಲ್ಲಿ ನಿರ್ಮಿಸಿರುವ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಉದ್ಘಾಟನಾ ಸಮಾರಂಭ ನಾಳೆ (ಡಿ.21) ಬೆಳಗ್ಗೆ 11:30ಗಂಟೆಗೆ ನಡೆಯಲಿದೆ..
ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಆಗಮಿಸಲಿದ್ದಾರೆ…
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಇತರೆ ಗಣ್ಯರು ಇರಲಿದ್ದಾರೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದ ಅಧ್ಯಕ್ಷ ನರೇಶ್ ಎಸ್ ಜಿ ತಿಳಿಸಿದ್ದಾರೆ…