ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ಇದು ದೊಡ್ಡ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ.
ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ.
ವೈದ್ಯರ ಮುಷ್ಕರಕ್ಕೆ ಕಾರಣವೇನು?
ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಹಲವು ವರ್ಷಗಳಿಂದ ಬಾಕಿಯಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಕರೆ ನೀಡಿದೆ.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧಿಗಳನ್ನು ಸರಬರಾಜು ಮಾಡದೇ ಇರುವುದು.
ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 03 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಸರ್ಕಾರಿ ಆದೇಶವಿದ್ದಾಗ್ಯೂ ಸಹ ಉಲ್ಲಂಘಿಸಿ, 1973 ರಿಂದ ಇಲ್ಲಿಯವರೆಗೆ ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡದೇ ಇರುವುದು.
ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಇದುವರೆವಿಗೂ ಪ್ರಕಟಿಸದೇ ಇರುವುದು.
ಇಲಾಖೆಯ ಎಲ್ಲಾ ವೃಂದದ ಯಾವುದೇ ಅಧಿಕಾರಿ-ನೌಕರರಿಗೆ ಕಳೆದ 05 ವರ್ಷಗಳಿಂದ ಮುಂಬಡ್ತಿಗಳನ್ನು ನೀಡದೇ ಇರುವುದು.
ನಿಯಮಗಳಲ್ಲಿ ಅವಕಾಶವಿದ್ದಾಗ್ಯೂ, ಸೇವಾನಿರತ ವೈದ್ಯರು, ಅಧಿಕಾರಿ-ನೌಕರರ ಉನ್ನತ ವ್ಯಾಸಂಗ/ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ನೀಡದೇ ಇರುವುದು.
ಇಲಾಖೆಯ ವರ್ಗಾವಣೆ ಕಾಯಿದೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸದೇ ಅವೈಜ್ಞಾನಿಕವಾಗಿ ಕೌನ್ಸಿಲಿಂಗ್ ವರ್ಗಾವಣೆ ಮಾಡುತ್ತಿರುವುದು.
ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರ ಪಾಲಿಕೆಗಳಲ್ಲಿ ಮಂಜೂರಾಗಿರುವ ಆರೋಗ್ಯ ಇಲಾಖೆಯ ಎನ್-ಕೇಡರ್ ಹುದ್ದೆಗಳಿಗೆ ನೇಮಕಾತಿ, ಮುಂಬಡ್ತಿ ಮತ್ತು ವರ್ಗಾವಣೆಗಳಿಗೆ ಆರೋಗ್ಯ ಇಲಾಖೆಯ ವೈದ್ಯರು, ಅಧಿಕಾರಿ-ನೌಕರರನ್ನೇ ನಿಯೋಜಿಸುವುದು.
ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದು.
ಗುತ್ತಿಗೆ ವೈದ್ಯರು-ನೌಕರರು ಹಾಗೂ ಎನ್.ಹೆಚ್.ಎಂ. ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ವೇತನ ಹೆಚ್ಚಳ ಮಾಡದೇ ಇರುವುದು.
ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆ ಅಡಿ ಕಾರ್ಯನಿರತ ಸುಮಾರು 6000 ನೌಕರರಿಗೆ ಹಲವಾರು ವರ್ಷಗಳಿಂದ 3-4 ತಿಂಗಳಿಗೊಮ್ಮೆ ವೇತನ ಭತ್ಯೆಗಳನ್ನು ನೀಡುತ್ತಿರುವುದು.
ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞವೈದ್ಯರು ಇತರೆ ಸಿಬ್ಬಂದಿಯವರಿಗೆ ಸಿ.ಜಿ.ಹೆಚ್.ಎಸ್/ಎ.ಐ.ಸಿ.ಟಿ.ಇ. (ವೈದ್ಯಕೀಯ ಶಿಕ್ಷಣ ಇಲಾಖೆಯ ಮಾದರಿಯಲ್ಲಿ) ವೇತನ ನೀಡುವುದು ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘವು ಹೋರಾಟಕ್ಕೆ ಮುಂದಾಗಿದೆ.
ಮುಷ್ಕರದ ಭಾಗವಾಗಿ ಮಾರ್ಚ್ 11ರಿಂದ ವೈದ್ಯರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿಯನ್ನು ಧರಿಸಿ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…