ನಾಳೆ(ಮಾ.22) ಕರ್ನಾಟಕ‌ ಬಂದ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ‌ ಮಾಹಿತಿ ಓದಿ….

ಇತ್ತೀಚೆಗೆ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕರ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಕನ್ನಡಿಗರ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ರಾಜ್ಯ ಸರಕಾರ ಮುಂದಾಗಲಿ ಎಂಬ ಕಾರಣಕ್ಕೆ ಹಲವು ಸಂಘಟನೆಗಳು ನಾಳೆ(ಮಾ.22) ಕರ್ನಾಟಕ‌ ಬಂದ್‌ಗೆ ಕರೆ ನೀಡಿವೆ.

ಸರ್ಕಾರ ಬೆಂಬಲ ನೀಡದ ಹಿನ್ನೆಲೆ ಶಾಲಾ – ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಾರಿಗೆ ಬಸ್‌ಗಳು ಎಂದಿನಂತೆ ಸಂಚಾರ ನಡೆಸಲಿವೆ.

ಬಂದ್‌ನ ಬಗ್ಗೆ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟವು ನೈತಿಕ ಬೆಂಬಲ ನೀಡಿದೆ. ಆದರೆ, ಶಾಲೆಗಳು ಎಂದಿನಂತೆ ನಡೆಯಲಿವೆ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌) ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌ ಅವರು ತಿಳಿಸಿದ್ದಾರೆ.

ಮಾರ್ಚ್‌ 22 ನಾಲ್ಕನೇ ಶನಿವಾರ ಆಗಿರುವ ಹಿನ್ನೆಲೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳಿಗೆ ರಜೆ ಇರಲಿವೆ. ಉಳಿದಂತೆ ಸೇವಾ ವಲಯದ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಲಿವೆ.

ಏನು ಇರುತ್ತೆ…?

ನಮ್ಮ ಮೆಟ್ರೋ, ರೈಲು

ಬಿಎಂಟಿಸಿ ಬಸ್‌ ಸೇವೆ

ಕೆಎಸ್‌ಆರ್‌ಟಿಸಿ ಬಸ್‌ ಸೇವೆ

ಶಾಲಾ ಕಾಲೇಜುಗಳು

ತರಕಾರಿ, ಹೂ, ಹಣ್ಣುಗಳು, ಸೂಪರ್ ಮಾರ್ಕೆಟ್

ಆಸ್ಪತ್ರೆ, ವೈದ್ಯಕೀಯ ಸೇವೆಗಳು

ಉಪಹಾರ ಮಂದಿರ, ಹೋಟೆಲ್‌ಗಳು

ಬಾರ್‌, ರೆಸ್ಟೋರೆಂಟ್‌, ಪಬ್‌ಗಳು

ದೈನಂದಿನ ಅವಶ್ಯಕ ವಸ್ತುಗಳಾದ ಹಾಲು, ದಿನಪತ್ರಿಕೆ, ಮೆಡಿಕಲ್

ಆ್ಯಂಬುಲೆನ್ಸ್ , ಹೋಲ್ ಸೆಲ್ ಬಟ್ಟೆ ಅಂಗಡಿಗಳು ಇರಲಿವೆ

ಖಾಸಗಿ ಬಸ್, ಶಾಲಾ ವಾಹನ ಓಡಾಟ ಇರಲಿದೆ.

ಏರ್ ಪೋರ್ಟ್ ಟ್ಯಾಕ್ಸಿ ಸೇವೆ ಇರಲಿದೆ

ಶೇಕಡ 65ರಷ್ಟು ಆಟೋಗಳ ಸೇವೆ ಇರಲಿದೆ

ಏನು ಇರಲ್ಲ…?

ಓಲಾ-ಊಬರ್, ಆಟೋ ಸೇವೆ ವ್ಯತ್ಯಯ ಸಾಧ್ಯತೆ.

ಸಿನಿಮಾ ಮಂದಿರಗಳು ಬೆಳಗಿನ ಶೋ ಇರಲ್ಲ. ಗೂಡ್ಸ್ ವಾಹನಗಳ ಸೇವೆಯಲ್ಲಿ ವ್ಯತ್ಯಯ

ದೊಡ್ಡಬಳ್ಳಾಪುರದಲ್ಲಿ ಪರಿಸ್ಥಿತಿ ಹೇಗಿರಲಿದೆ…?

ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು,  ಯುಗಾದಿ ಹಬ್ಬ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ  ಇರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಹಳಷ್ಟು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಕಾರಣ ಬಂದ್ ಕೈ ಬಿಡಲು ನಿರ್ಧಾರ ಮಾಡಲಾಗಿದೆ.

ನಾಡು ನುಡಿ ವಿಚಾರವಾಗಿ ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ಸಂಘ ಸಂಸ್ಥೆಗಳು ಹಿಂಜರಿದ ಉದಾಹರಣೆ  ಎಂದಿಗೂ ಇಲ್ಲ, ಆದರೆ, ಎಸ್ ಎಸ್ ಎಲ್ ಸಿ  ವಾರ್ಷಿಕ ಪರೀಕ್ಷೆಯು  ಮಾರ್ಚ್ 21ರಿಂದ ಆರಂಭವಾಗಿದ್ದು , ನಾವು ಬಂದ್ ಗೆ ಕರೆ ನೀಡಿದರೆ, ಶಾಲಾ ಮಕ್ಕಳು ಪರದಾಡುವ ಪರಿಸ್ಥಿತಿ ಎದುರಾಗುತ್ತದೆ. ಅಲ್ಲದೇ ಪರೀಕ್ಷೆ ಕೇಂದ್ರಗಳಿಗೆ ಮಕ್ಕಳು ತೆರಳಲು ಕಷ್ಟವಾಗುತ್ತದೆ. ಜೊತೆಗೆ ನಮ್ಮ ದೊಡ್ಡಬಳ್ಳಾಪುರ ಜನತೆ ಬಹುತೇಕ ನೇಕಾರಿಕಾ ವೃತ್ತಿಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ, ಯುಗಾದಿ ಹಬ್ಬದ ಸಂದರ್ಭದಲ್ಲಿ ಬಂದ್ ಮಾಡುವುದರಿಂದ ನೇಕಾರಿಕೆಯ ಮೇಲೆ ಪೆಟ್ಟು ಬೀಳುತ್ತದೆ. ಅಲ್ಲದೇ ಸ್ಥಳೀಯ ವ್ಯವಹಾರದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆಯೆಂದು ಸಂಘಟನೆ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಸರ್ವ ಸಂಘಟನೆಗಳ ಮುಖಂಡರು, ಪ್ರಮುಖರು ಒಮ್ಮತದಿಂದ ಮಾರ್ಚ್ 22ರಂದು ನಗರದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

14 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

16 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

17 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago