ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆಯಲ್ಲಿರುವ ಇತಿಹಾಸ ಪ್ರಸಿದ್ಧ ಸಪ್ತಮಾತೃಕಾ ಮಾರಿಯಮ್ಮ ದೇವಿಯ ಕರಗ ಮಹೋತ್ಸವ ನಾಳೆ (ಮೇ.12) ರಾತ್ರಿ ನಡೆಯಲಿದೆ.
ಇದರ ಅಂಗವಾಗಿ ಇಂದು ಮುಂಜಾನೆ ಸುಮಾರು 4:15ಕ್ಕೆ ಹಸಿ ಕರಗ ಮಹೋತ್ಸವ ಶ್ರದ್ಧಾ ಭಕ್ತಿಗಳಿಂದ ನೆರವೇರಿತು.
ಈ ಹಸಿ ಕರಗ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಇಂದು ಮತ್ತೆ ನಾಳೆ ಕರಗ ಮಹೋತ್ಸವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಪೂಜಾ ಕಾರ್ಯಕ್ರಮಗಳ ವಿವರ
ಭಾನುವಾರ ಸಂಜೆ 6ಕ್ಕೆ ದ್ರೌಪದಮ್ಮ ದೇವಿಗೆ ಆರತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಸೋಮವಾರ ಬೆಳಗ್ಗೆ 8 ಗಂಟೆಗೆ ಸಪ್ತಮಾತೃಕಾ ಮಾರಿಯಮ್ಮ ದೇವಿಗೆ ಅಭಿಷೇಕ, ಲಲಿತಾ ಸಹಸ್ರನಾಮ, ಪ್ರಸಾದ ವಿನಿಯೋಗ, ರಾತ್ರಿ 9:45ಕ್ಕೆ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಕರಗ ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಡಲಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…