ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ವಿದ್ಯಾರ್ಥಿಗಳ ಪಾಲಿಗೆ ಟರ್ನಿಂಗ್ ಪಾಯಿಂಟ್. ಈಗಾಗಲೇ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಿಕೊಂಡಿದೆ.
ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದಾರೆ. ಇದರಲ್ಲಿ 7,218 ಮಂದಿ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಖಾಸಗಿ ಪರೀಕ್ಷಾ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ಒಂದು ಕೇಂದ್ರವನ್ನು ದೇವನಹಳ್ಳಿಯಲ್ಲಿ ಮೀಸಲಿರಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಅಂತರವನ್ನು ಸೆಕ್ಷನ್ 144 ಕಾಯ್ದೆಯಂತೆ ನಿರ್ಭಂದಿತ ಸ್ಥಳ ಎಂದು ಗುರುತಿಸಲಾಗಿದ್ದು, ಪರೀಕ್ಷೆಗೆ ಸಂಬಂಧಪಡದವರು ಈ ಪ್ರದೇಶದಲ್ಲಿ ಪ್ರವೇಶ ಮಾಡುವಂತಿಲ್ಲ.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ, ಪೀಠೋಪಕರಣ, ಕುಡಿಯುವ ನೀರು, ಪ್ರತ್ಯೇಕ ಶೌಚಾಲಯ, ವಿದ್ಯುತ್ ಸೇರಿದಂತೆ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ , ಕ್ಯಾಮರ, ಡಿಜಿಟಲ್ ಗಡಿಯಾರ ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೂ ರೊಟೇಷನ್ ಆಧಾರದ ಮೇಲೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು ಬೇರೊಂದು ಕ್ಲಷ್ಟರ್ ನಿಂದ ನೇಮಕ ಮಾಡಲಾಗಿದ್ದು ಅವರವರ ಬೋಧನಾ ವಿಷಯದ ದಿನದಂದು ಪರೀಕ್ಷಾ ಕರ್ತವ್ಯದಿಂದ ಬಿಡುವು ನೀಡಲಾಗಿದೆ.
ವಿಕಲಚೇತನ ಮಕ್ಕಳಿಗೆ ಕೆಳ ಮಹಡಿಯಲ್ಲಿಯೇ ಆಸನ ವ್ಯವಸ್ಥೆ ಮಾಡಲಾಗಿದೆ. 60 ನಿಮಿಷಗಳ ಹೆಚ್ಚಿನ ಸಮಯಾವಕಾಶವನ್ನು ಕಲ್ಪಿಸಲಾಗಿದೆ. ಅಂದ ಮಕ್ಕಳಿಗೆ 2 ಭಾಷಾ ವಿಶಯಗಳಿಗೆ ವಿನಾಯಿತಿಯನ್ನು ಮತ್ತು ಗಣಿತ, ವಿಜ್ಞಾನ ವಿಷಯಗಳಿಗೆ ಬದಲು ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳನ್ನು ಪರ್ಯಾಯವಾಗಿ ಬರೆಯಲು ಅವಕಾಶ ನೀಡಲಾಗಿದೆ.
ಶಾಂತಿ, ಶಿಸ್ತು, ಸುವ್ಯವಸ್ಥಿತವಾಗಿ ಗೌಪ್ಯತೆ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…