ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಸೇವಾ ಸಿಂಧು ವೆಬ್ ಸೈಟ್ ಉನ್ನತ್ತೀಕರಣಕಾಗಿ ಅರ್ಜಿ ವಿಳಂಬವಾಗಿತ್ತು. ವೆಬ್ ಸೈಟ್ ಸುಧಾರಿತ ಆದ ಮೇಲೆ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭ ಮಾಡಲಾಗುತ್ತಿದೆ. ಫಲಾನುಭವಿನಗಳು ಆಧಾರ್ ನಂಬರ್ ಜೊತೆ ಆರ್ ಆರ್ ನಂಬರ್ ನ್ನು ಕಡ್ಡಾಯವಾಗಿ ಜೋಡಣೆ ಮಾಡಬೇಕು.ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಒನ್ ಕೇಂದ್ರಗಳಲ್ಲೂ ಸಹ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬೆಸ್ಕಾಂನ ಸ್ಥಳೀಯ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕ್ಕೆ ಗೆ ಅವಕಾಶ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 1912ಗೆ ಕರೆ ಮಾಡಬಹುದಾಗಿದೆ.
ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಒಟ್ಟು 2.14 ಕೋಟಿ ಫಲಾನುಭವಿನಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಇದಾಗಿದೆ. ಅರ್ಜಿ ಸಲ್ಲಿಸುವಾಗ ಮನೆಯ ಕರಾರು ಪತ್ರ ಅಥವಾ ವೋಟರ್ ಐಡಿ ಅಥವಾ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕಾಗಿದೆ.