ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಇಂದು ಸಂಜೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು….

ನಾಳೆ ಮಧ್ಯಾಹ್ನ 12.00 ರಿಂದ 12.15 ಗಂಟೆಯ ಶುಭ ಮೂಹರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಕಳೆದ ವರ್ಷ 1.50 ಲಕ್ಷದವರೆಗೂ ಭಕ್ತಾದಿಗಳು ಭಾಗಿಯಾಗಿದ್ದರು. ಈ ಬಾರಿ ಬ್ರಹ್ಮರಥೋತ್ಸವವು ರಜೆ ದಿನ ಬಂದಿರುವುದರಿಂದ ಸುಮಾರು ಎರಡು ಲಕ್ಷ ಭಕ್ತಾದಿಗಳು ಬರುವ ಸಾಧ್ಯತೆ ಇದೆ. ಟ್ರಾಫಿಕ್ ಸಮಸ್ಯೆ, ಜನಸಂದಣಿ ನಿಯಂತ್ರಿಸಲು ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ.

ಘಾಟಿ ಕ್ಷೇತ್ರಕ್ಕೆ ಆಗಮಿಸಲು ಪ್ರಮುಖವಾಗಿ ಎರಡು ರಸ್ತೆ ಸಂಪರ್ಕಗಳಿದ್ದು, ಮಾಕಳಿ ಹಾಗೂ ಕಂಟನಕುಂಟೆ ರಸ್ತೆಗಳಲ್ಲಿ ಸ್ವಚ್ಚತೆ ಕಾರ್ಯ, ಫುಟ್ ಪಾತ್ ಒತ್ತುವರಿ ತೆರವು ಮಾಡಲಾಗಿದೆ. ಇಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ. ದೇವಾಲಯ ಸುತ್ತಮುತ್ತಲಿನ ಫುಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವುಮಾಡಲಾಗಿದ್ದು, ಭಕ್ತರ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸಲಾಗಿದೆ.

ರಥೋತ್ಸವಕ್ಕೆ ಬರುವ ಭಕ್ತಾದಿಗಳ ವಾಹನಗಳಿಗೆ ಕಂಟನಕುಂಟೆ ಮಾರ್ಗ ಹಾಗು ಮಾಕಳಿ ಮಾರ್ಗ ಬಳಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಭಕ್ತಾದಿಗಳು ತಮ್ಮ ವಾಹನಗಳನ್ನು ನಿಲ್ಲಿಸಬೇಕು. ಪಾರ್ಕಿಂಗ್ ಸ್ಥಳದಿಂದ ದೇವಾಲಯದ ಬಳಿಗೆ ತೆರಳಲು ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ಭಕ್ತಾದಿಗಳು ಆ ಬಸ್ ಗಳ ಮೂಲಕವೇ ಬಂದು ದರ್ಶನ ಪಡೆದು ಮತ್ತೇ ಅದೇ ಬಸ್ ಗಳ ಮೂಲಕ ಮರಳಬಹುದು. ದೇವಾಲಯದ ಬಳಿ ವಾಹನ ಸಂಚಾರ ದಟ್ಟಣೆ, ಸಂಚಾರಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದ್ದು ಭಕ್ತಾದಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎ ಬಿ ಬಸವರಾಜು ತಿಳಿಸಿದ್ದಾರೆ.

2026ರ ಜನವರಿ 31 ರವರೆಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ. ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು 50 ರೂಪಾಯಿಯ ವಿಶೇಷ ದರ್ಶನ ವ್ಯವಸ್ಥೆ ಇರಲಿದೆ. ಡಿಸೆಂಬರ್ 28 ರವರೆಗೆ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತರಿಗೆ ಉತ್ತಮ ಅನುಭವ ನೀಡುವ ನಿಟ್ಟಿನಲ್ಲಿ ಅಗತ್ಯಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿ ವರ್ಷದಂತೆ ಬ್ರಹ್ಮರಥೋತ್ಸವದಲ್ಲಿ ಎರಡು ಲಕ್ಷದವರೆಗೂ ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಭಕ್ತರಿಗೆ ಪಾರ್ಕಿಂಗ್ ಸಮಸ್ಯೆ ಬಗೆ ಹರಿಸಲು ಕ್ರಮ ವಹಿಸಲಾಗಿದ್ದು, ಕಾರು ಸೇರಿದಂತೆ ಇತರೆ ವಾಹನಗಳಿಗೆ 14 ಪಾರ್ಕಿಂಗ್ ಸ್ಥಳ, ದ್ವಿಚಕ್ರ ವಾಹನಗಳಿಗೆ 4 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಭದ್ರತೆಗಾಗಿ ಈ ವರ್ಷ 1000 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿದೆ. ಜತೆಗೆ 100 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅದರ ವೀಕ್ಷಣೆಗೆ ಕಂಟ್ರೋಲ್ ರೂಂ ಕೂಡ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ತಿಳಿಸಿದ್ದಾರೆ.

ಬ್ರಹ್ಮರಥೋತ್ಸವದ ಹಿನ್ನಲೆ ಘಾಟಿಯ ರಂಗ ಮಂದಿರದಲ್ಲಿ ಡಿಸೆಂಬರ್ 24, 25 ರಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಒಟ್ಟು 70 ಕಲಾ ತಂಡಗಳು ನೋಂದಣಿ ಆಗಿದ್ದು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗಲೂ ಅವಕಾಶವಿದ್ದು, ರಂಗ ಮಂದಿರ ಬಳಿ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಆಗಿ ನೋಂದಾಯಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್ ಅನುರಾಧಾ ತಿಳಿಸಿದ್ದಾರೆ.

ಕಂಟನಕುಂಟೆ , ಹಾಡೋನಹಳ್ಳಿ ಗ್ರಾಪಂ ವ್ಯಾಪ್ತಿಯ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಬದಿಯ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಫುಟ್ ಪಾತ್ ಸ್ವಚ್ಚತೆ, ಅಂಗಡಿಗಳ ತೆರವು ಮಾಡಲಾಗಿದೆ. ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ತುರ್ತು ಸೇವೆಗಳ ನಿಮಿತ್ತ 04 ಅಂಬುಲೆನ್ಸ್ ವ್ಯವಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ, ಹೆಚ್ಚುವರಿ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ, ಪಾರ್ಕಿಂಗ್ ಸ್ಲಾಟ್ ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರು, ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಡಿ.25ರ ಗುರುವಾರದಂದು ಪ್ರಾತಃ ಕಾಲ 2:00 ಗಂಟೆಗೆ ದೇವಾಲಯ ತೆರೆಯಲಾಗುವುದು, 2:30 ಗಂಟೆಗೆ ದೇವರಿಗೆ ಅಭಿಷೇಕ ಪ್ರಾರಂಭವಾಗಿ ಬೆಳಗ್ಗೆ 4:30 ಗಂಟೆಗೆ ಮಹಾ ಮಂಗಳಾರತಿ ನೆರವೇರುವುದು, ಬೆಳಗ್ಗೆ 5:00 ರಿಂದ 6:00 ಗಂಟೆಗಳವರೆಗೆ ಸ್ಥಳೀಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6 ಗಂಟೆ ನಂತರ ಭಕ್ತಾಧಿಗಳಿಗಾಗಿ ಧರ್ಮ ದರ್ಶನ ಮತ್ತು ರೂ. 50 ರ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ.

ಬ್ರಹ್ಮರಥೋತ್ಸವ ದಿನದಂದು ಬೆಳಗ್ಗೆ 6ರಿಂದ ರಾತ್ರಿ 8:30ರವರೆಗೆ ಎಲ್ಲಾ ಭಕ್ತಾಧಿಗಳಿಗೂ ಉಚಿತ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗಿರುತ್ತದೆ.

ಭಕ್ತಾಧಿಗಳಿಗೆ ಸುಗಮ ದರ್ಶನದ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು ರೂ. 50ಗಳ ವಿಶೇಷ ದರ್ಶನದ ಕ್ಯೂ ಲೈನ್‌ ಅನ್ನು ಮಾಡಿಸಲಾಗಿರುತ್ತದೆ. (ಕ್ಯೂ ಲೈನ್‌ ನಲ್ಲಿರುವ ಭಕ್ತಾಧಿಗಳಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ).

ಹಿರಿಯ ನಾಗರೀಕರು, ವಿಶೇಷ ಚೇತನರು, ಗರ್ಭಿಣಿಯರು ಮತ್ತು 01 ವರ್ಷದ ಒಳಗಿನ ಶಿಶುವಿನೊಂದಿಗೆ ಬರುವ ಸ್ತ್ರೀಯರಿಗೆ ನೇರ ದರ್ಶನದ ವ್ಯವಸ್ಥೆಗಾಗಿ Buggis ಗಳ ವ್ಯವಸ್ಥೆ ಮಾಡಲಾಗಿರುತ್ತದೆ.

ಸಾರ್ವಜನಿಕ ಸ್ಥಳಗಳಲ್ಲಿ ಭಕ್ತಾಧಿಗಳು/ ಸಾರ್ವಜನಿಕರ ಉಪಯೋಗಕ್ಕಾಗಿ Mobile ಶೌಚಾಲಯಗಳ ವ್ಯವಸ್ಥೆ ಮಾಡಲಾಗಿರುತ್ತದೆ.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

50 minutes ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

5 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

14 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago