ನಾಳೆ ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಮದ್ಯ, ಮಾಂಸ ಮಾರಾಟ ನಿಷೇಧ

ನಾಳೆ ರಾಷ್ಟ್ರಪಿತ ಮಾಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಶಾಂತಿ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಸುಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟವನ್ನು ಅ.1ರ ರಾತ್ರಿ 11-00 ಗಂಟೆಯಿಂದ ಅ.2ರ ರಾತ್ರಿ 12-00ಗಂಟೆಯವರೆಗೆ ನಿಷೇಧಿಸಿ ಆದೇಶಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.

ಈ ಹಿನ್ನೆಲೆ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ದೊಡ್ಡಬಳ್ಳಾಪುರ ನಗರಸಭೆ‌ ಕೂಡ ಆದೇಶ ಹೊರಡಿಸಿದೆ.

ನಗರಸಭೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಬಾರಿ ಗಾಂಧಿ ಜಯಂತಿಯ ದಿನವೇ ಮಹಾಲಯ ಅಮಾವಾಸ್ಯೆ ಕೂಡ ಬಂದಿದ್ದು, ಅಂದು ಪ್ರಾಣಿವಧೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಹಾಗೂ ನಗರಸಭೆ ಆದೇಶ ಹೊರಡಿಸಿವೆ. ಇದರಿಂದ ನಗರದಲ್ಲಿ ಚಿಕನ್, ಮಟನ್ ಸಿಗಲಾರದು. ಇದು ಹಬ್ಬದ ‌ಮೂಡ್​​​ನಲ್ಲಿದ್ದವರು ಮತ್ತು ವ್ಯಾಪಾರಿಗಳು ಕಂಗಲಾಗುವಂತೆ ಮಾಡಿದೆ.

ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿರುವ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮೋಹನ್‌ದಾಸ್ ಕರಮಚಂದ್ ಗಾಂಧಿ ಜೀ ಅವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಆಚರಿಸಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!