ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಆದ ಕೆ ಹೆಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಾಳೆ ಡಿಸೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕುಂದುಕೊರತೆಗಳ ಸಭೆ ನಡೆಯಲಿದೆ.
ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಜಾತ್ರೆಗೆ ಆಗಮಿಸುತ್ತಿರುವ ಮಾನ್ಯ ಸಚಿವರು ತೂಬಗೆರೆ ಹೋಬಳಿಯ ಸಾರ್ವಜನಿಕರ ಸಮಸ್ಯೆ/ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸ್ಥಳ: ಎ ಎಸ್ ವಿ ಎನ್ ವಿ ಸಭಾಂಗಣ , ಎಸ್ ಎಸ್ ಘಾಟಿ. ಸಮಯ: ಬೆಳಿಗ್ಗೆ 10 ಗಂಟೆಗೆ