ನಾಳೆ (ಏ.13) ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಭಾನುವಾರ ಬೆಳಗ್ಗೆ ಸುಮಾರು 7:15ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಅವರ ಜೊತೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.