ನಾಳೆ ದೊಡ್ಡಬಳ್ಳಾಪುರಕ್ಕೆ ಡಿ.ಕೆ ಸುರೇಶ್ ಆಗಮನ. ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಮತ್ತು ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ..

ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಭಾನುವಾರ(ನಾಳೆ) ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಮತ್ತು ಸೋಮವಾರ ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಭಾನುವಾರ ಸಂಜೆ 4 ಗಂಟೆಗೆ ನಡೆಯಲಿರುವ ಅಧಿಕ ಹಾಲು ಕರೆಯುವ ಸ್ಪರ್ಧೆ ಕಾರ್ಯಕ್ರಮ ಉದ್ಘಾಟನೆಗೆ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಆಗಮಿಸುತ್ತಿದ್ದಾರೆ. ಮುಖ್ಯ ಅಥಿತಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ, ಸಂಸದ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು, ಎಂಎಲ್ಸಿ ಎಸ್ ರವಿ, ಬಮುಲ್ ಉಪಾಧ್ಯಕ್ಷ ರಾಜಣ್ಣ, ಮಾಜಿ ಶಾಸಕ ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಬಿ.ಮುನೇಗೌಡ ಭಾಗಿಯಾಗಲಿದ್ದಾರೆ. ಅಧ್ಯಕ್ಷತೆಯನ್ನ ಕೊನಘಟ್ಟ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಮುನಿರಾಜು ವಹಿಸಲಿದ್ದಾರೆ ಎಂದು ಬಮುಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ತಾಲ್ಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಮಾಡಬೇಕು. ಮಿಶ್ರತಳಿ ಕರುಗಳ ಪ್ರದರ್ಶನಕ್ಕೆ ತಮ್ಮ ಕರುಗಳನ್ನ ಕರೆದುಕೊಂಡು ಬನ್ನಿ ಎಲ್ಲಾ ರೈತರಿಗೆ ಬಿ.ಸಿ ಆನಂದ್ ಕುಮಾರ್ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 hour ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

4 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

19 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

22 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago