
2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28 ಶನಿವಾರದಿಂದ ಮಾರ್ಚ್ 17 ಮಂಗಳವಾರದವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯ ವರೆಗೆ ಜರುಗಲ್ಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 04, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 03, ಹೊಸಕೋಟೆ ತಾಲ್ಲೂಕಿನಲ್ಲಿ 07, ನೆಲಮಂಗಲ ತಾಲ್ಲೂಕಿನಲ್ಲಿ 06 ಒಟ್ಟು 20 ಪರೀಕ್ಷಾ ಕೇಂದ್ರಗಳು ಇವೆ.
ಪರೀಕ್ಷೆಗೆ ನೋಂದಾಯಿಸಿಕೊಂಡ ಹೊಸ ವಿದ್ಯಾರ್ಥಿಗಳು 10,821, ಖಾಸಗಿ ವಿದ್ಯಾರ್ಥಿಗಳು 166, ಪುನರಾವರ್ತಿತ ವಿದ್ಯಾರ್ಥಿಗಳು 578 ಸೇರಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಸಂಖ್ಯೆ 11,565 ಇದ್ದು, ಕಲಾ ವಿಭಾಗದಲ್ಲಿ 833 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5405, ವಿಜ್ಞಾನ ವಿಭಾಗದಲ್ಲಿ 4583, ಸರ್ಕಾರಿ ಕಾಲೇಜುಗಳಲ್ಲಿ 1,724 ವಿದ್ಯಾರ್ಥಿಗಳು, ಅನುದಾನಿತ ಕಾಲೇಜಿನಲ್ಲಿ 1,074, ಅನುದಾನರಹಿತ ಕಾಲೇಜಿನಲ್ಲಿ 8,023 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗೆ ಹಾಜರಾಗುವ ಗಂಡು ಮಕ್ಕಳ ಸಂಖ್ಯೆ 4695, ಹೆಣ್ಣುಮಕ್ಕಳ ಸಂಖ್ಯೆ 6126 ಸೇರಿ ಒಟ್ಟು 10,821 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲ್ಲಿದ್ದಾರೆ. ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.