
ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಅಂಗನವಾಡಿ ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ನಾಳೆ (ಅ.16) ರಜೆ ಘೋಷಿಸಿದ್ದಾರೆ.
ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.