ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲ್ಲೂಕಿನಲ್ಲಿ 12, ನೆಲಮಂಗಲ ತಾಲ್ಲೂಕಿನಲ್ಲಿ 13 ಸೇರಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಕ್ಕೆ ನೋಂದಣಿ ವಿವರ ನೋಡುವುದಾದರೆ ಗಂಡು ಮಕ್ಕಳ ಸಂಖ್ಯೆ 7070, ಹೆಣ್ಣು ಮಕ್ಕಳ ಸಂಖ್ಯೆ 7244 ಸೇರಿ ಒಟ್ಟು 14,314 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.

ಅದರಲ್ಲಿ ಮೊದಲ(ಪ್ರಥಮ) ಬಾರಿ ಪರೀಕ್ಷೆ ಬರೆಯುವವರ ಸಂಖ್ಯೆ 13,418. ಪುನರಾವರ್ತಿತ ಅಭ್ಯರ್ಥಿಗಳು 896 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ 52 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

“ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮವಾಗಿ, ಸುಲಲಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ-ಭೀತಿ ಇಲ್ಲದೇ ಧೈರ್ಯದಿಂದ ಪರೀಕ್ಷೆ ಎದರುರಿಸಬೇಕು. ಪರೀಕ್ಷೆ ಬರೆಯಲಿರುವ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ, ಒತ್ತಡ ರಹಿತವಾಗಿ ಪರೀಕ್ಷೆಯನ್ನು ಬರೆಯಲು ಪೂರಕವಾದ ವಾತಾವರಣವನ್ನು ಪೋಷಕರು ನೀಡಬೇಕು” ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಹೇಳಿದ್ದಾರೆ.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

8 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

9 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

11 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

22 hours ago