ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ (law) ತರಗತಿಗಳು ಪ್ರಾರಂಭ

ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನಲ್ಲಿ ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ(law) ತರಗತಿಗಳು ಅಧಿಕೃತವಾಗಿ ಪ್ರಾರಂಭವಾಗಲಿವೆ ಎಂದು ಪ್ರಾಂಶುಪಾಲರಾದ ಡಾ.ವೆಂಕಟೇಶ್ ಟಿ.ಬಿ ತಿಳಿಸಿದ್ದಾರೆ.

ಸೆ.24ರ ಬುಧವಾರ ಬೆಳಗ್ಗೆ 9:30ರಿಂದ ತರಗತಿಗಳು ಪ್ರಾರಂಭವಾಗಿ ಮಧ್ಯಾಹ್ನ 3ಕ್ಕೆ ಮುಕ್ತಾಯವಾಗಲಿವೆ. ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಇರಲಿದೆ. ಈಗಾಗಲೇ ಮೂರು ವರ್ಷದ ಎಲ್ ಎಲ್ ಬಿ ಪದವಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ‌ ನಾಳೆಯಿಂದ ಪ್ರಾರಂಭವಾಗುವ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಿದರು.

ಮೂರು ವರ್ಷದ ಎಲ್ ಎಲ್ ಬಿ ಪದವಿಯ ಮೊದಲ ಬ್ಯಾಚ್ ನಲ್ಲಿ ಒಟ್ಟು 9 ಮಂದಿ ವಿದ್ಯಾರ್ಥಿನಿಯರು, 51 ಮಂದಿ ವಿದ್ಯಾರ್ಥಿಗಳು ಸೇರಿ 60 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಹೇಳಿದರು.

ಕಾನೂನು ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ಇದೇ ಮೊದಲ ಬಾರಿಗೆ ಶ್ರೀ ಕೊಂಗಾಡಿಯಪ್ಪ ಕಾಲೇಜ್ ಕ್ಯಾಂಪಸ್ ನಲ್ಲಿ ಲಾ ಕೋರ್ಸ್ ಪ್ರಾರಂಭ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು  ಕಾನೂನು ಪದವಿ ಪಡೆಯಲು ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ದೂರದ ಜಿಲ್ಲೆಗಳಿಗೆ ಹೋಗಿ ಪದವಿ ಪಡೆಯಲಾಗುತ್ತಿತ್ತು. ಇದೀಗ ಜಿಲ್ಲೆಯ ಅದರಲ್ಲೂ ದೊಡ್ಡಬಳ್ಳಾಪುರ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಲಾ ಕೋರ್ಸ್ ನ್ನು  ಈ ವರ್ಷದಿಂದ ಆರಂಭಿಸಲಾಗಿದೆ ಎಂದು ಹೇಳಿದರು.

ತರಗತಿಗಳನ್ನು ಪ್ರಾರಂಭ ಮಾಡಲು ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ. ನುರಿತ ಉಪನ್ಯಾಸಕರು, ಮೂಟ್ ಕೋರ್ಟ್ ವ್ಯವಸ್ಥೆ, ಮಧ್ಯಾಹ್ನದ ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಪಾಠ ಪ್ರವಚನಕ್ಕೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ತರಗತಿಗಳಿಗೆ ನ್ಯಾಯಾಧೀಶರು, ಪ್ರಖ್ಯಾತ ವಕೀಲರು, ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕಾನೂನು ತರಬೇತಿ ನೀಡಲಾಗುವುದು ಎಂದರು…

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

2 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

2 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

4 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

7 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

8 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

8 hours ago