ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ 2022-23ನೇ ಸಾಲಿನ ಪ್ರಾದೇಶಿಕ ಸಭೆಯನ್ನು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ಆಗಸ್ಟ್ 8ರ ಬೆಳಗ್ಗೆ 10:30ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜನೆ ಮಾಡಲಾಗಿದೆ.
ಕಾರ್ಯಕ್ರಮವನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾದ ಹೆಚ್.ಪಿ ರಾಜ್ ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಜ್ಯೋತಿ ಪ್ರಜ್ವಲನೆಯನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಎಂ.ಮಂಜುನಾಥ್ ಅವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ಸಹಕಾರ ಹಾಲು ಮಹಾ ಮಂಡಳಿ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಮನಗರ ನಿರ್ದೇಶಕ ಪಿ.ನಾಗರಾಜ್, ಹೊಸಕೋಟೆ ನಿರ್ದೇಶಕ ಸಿ.ಮಂಜುನಾಥ್, ಆನೇಕಲ್ ನಿರ್ದೇಶಕ ಬಿ.ಜಿ.ಆಂಜಿನಪ್ಪ, ಮಾಗಡಿ ನಿರ್ದೇಶಕ ನರಸಿಂಹಮೂರ್ತಿ, ಸೇರಿದಂತೆ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ನಿರ್ದೇಶಕರು ಭಾಗವಹಿಸಲಿದ್ದಾರೆ.
ಪ್ರಾದೇಶಿಕ ಸಭೆಯಲ್ಲಿ ಹಾಲು ಶೇಖರಣೆ, ಹಾಲಿನ ಗುಣಮಟ್ಟ, ಹಾಲು ಸಾಗಾಣಿಕೆ ಮಾರ್ಗ, ತಾಂತ್ರಿಕ ಸೌಲಭ್ಯ, ಒಕ್ಕೂಟ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನ ಸೇರಿದಂತೆ ಇತರೆ ವಿಷಯಗಳ ಚರ್ಚೆ ಮಾಡಲಾಗುತ್ತದೆ. ಜೊತೆಗೆ ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಸದಸ್ಯರು, ಅತ್ಯುತ್ತಮ ಹಾಲು ಉತ್ಪಾದಕರ ಸಂಘಗಳು ಹಾಗೂ ಸಿಬ್ಬಂದಿಗೆ ಪ್ರಶಸ್ತಿ ಪುರಸ್ಕಾರ ನೀಡಲಾಗುತ್ತದೆ.