ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ- ಸಿಎಂ ಸಿದ್ದರಾಮಯ್ಯ

ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ನ ಗೌರಿಶಂಕರ್ ಹಾಗೂ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜೊತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದರು.

ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜೊತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅದನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ಲವೋ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

7 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

11 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

14 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago