ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ- ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಇಂದು ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ. ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದರು.

ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ. ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದು ಹೇಳಿದರು.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.

ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

6 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

17 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

22 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago