ನಾವು ಸಂವಿಧಾನ, ದೇಶ ವಿರೋಧಿಗಳಲ್ಲ- ಮೂಲಭೂತ ಸೌಕರ್ಯ ಒದಗಿಸದ, ಶುದ್ಧ ಕುಡಿಯುವ ನೀರು, ಕೆರೆಗಳ ಸಂರಕ್ಷಣೆ ಮಾಡದ ಅಧಿಕಾರಿಗಳ ವಿರುದ್ಧ ನಮ್ಮ ಹೋರಾಟ- ಜ.26ರಂದು ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ನಿರ್ಧಾರ

ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ್ದಾರೆ.

ನಿರ್ಲಕ್ಷ್ಯವಹಿಸುತ್ತಿರುವ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ನಡೆ ಖಂಡಿಸಿ ಜ.26 ರಂದು ಗಣರಾಜ್ಯೋತ್ಸವ ದಿನ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸುವ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲು ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ತೀರ್ಮಾನಿಸಿದ್ದಾರೆ.

ಜ.26 ರಂದು ಗಣರಾಜ್ಯೋತ್ಸವ ದಿನ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಿ ಪ್ರತಿಭಟನೆ ಮಾಡುವುದನ್ನು  ಕೈಬಿಡುವಂತೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಆದರೆ, ಅಧಿಕಾರಿಗಳ ಸಂಧಾನ ಸಭೆ ವಿಫಲವಾಗಿದೆ.

ಈ ಸಂದರ್ಭದಲ್ಲಿ ಕೆರೆ ಸಂರಕ್ಷಣೆ ಹೋರಾಟ ಸಮಿತಿ ಮುಖಂಡ ವಸಂತ್ ಮಾತನಾಡಿ, 10 ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದರು ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ, ಶುದ್ಧ ಕುಡಿಯುವ ನೀರು ಕೊಟ್ಟಿಲ್ಲ. ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಭರವಸೆಯಲ್ಲೇ ಕಾಲಕಳೆದಿದ್ದಾರೆ. ಯಾವ ಭರವಸೆಯು ಕಾರ್ಯರೂಪಕ್ಕೆ ಬಂದಿಲ್ಲ. ನಮ್ಮ ಭಾಗದ ಎಲ್ಲಾ ಕೆರೆಗಳು ಸಂಪೂರ್ಣ ಕಲುಷಿತಗೊಂಡಿವೆ. ಕೊಳವೆ ಬಾವಿಗಳಲ್ಲಿ ಬರುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ. ಶೀಘ್ರವಾಗಿ ಇದಕ್ಕೆ ಕಾರಣವಾಗಿರುವವರ ಸೂಕ್ತ ಕಾನೂನು ಕ್ರಮ ಕೈಗೊಂಡು ಕೆರೆಗಳ ಶುದ್ದೀಕರಣ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಕೆರೆ ಅಂಚಿನಲ್ಲಿ ವಾಸವಾಗಿರುವ ಎಲ್ಲಾ ಕುಟುಂಬಗಳು ಕೂಲಿ ಮಾಡಿಕೊಂಡು ಜೀವನ ನಡೆಸುವ ಹಿಂದುಳಿದ ವರ್ಗಕ್ಕೆ ಸೇರಿದವರು. ಪ್ರತಿ ಮನೆಯಲ್ಲೂ ಚರ್ಮ ರೋಗಗಳಿಂದ ಬಳಲುತ್ತಿರುವ ಮಕ್ಕಳು ಇದ್ದಾರೆ. ಹಿರಿಯರು ಉಸಿರಾಟದ ತೊಂದರೆ, ಕೈ, ಕಾಲುಗಳ ನೋವುಗಳಿಂದ ಬಳಲುತ್ತಿದ್ದಾರೆ. ನಮಗೆ ಶುದ್ದ ಕುಡಿಯುವ ನೀರು ಕೊಡುವಂತೆ ಹತ್ತು ವರ್ಷಗಳಿಂದಲು ಹೋರಾಟ ನಡೆಸುತ್ತಲೇ ಬರುತ್ತಿದ್ದರು ಸಮಸ್ಯೆ ಮಾತ್ರ ಉಲ್ಬಣವಾಗುತ್ತಲೇ ಇದೆ. ವಾಸ್ತವ ಪರಿಸ್ಥಿತಿ ಹಿಗಿರುವಾಗ ಗಣರಾಜ್ಯೋತ್ಸವ ಆಚರಣೆ ಮಾಡುವುದರಲ್ಲಿ ಅರ್ಥವಿದೆಯೆ ಎಂದು ಪ್ರಶ್ನಿಸಿದರು.

ಜ.26ರಂದು ಎರಡೂ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸುವುದು ಶತಸಿದ್ಧ. ನಾವು ಸಂವಿಧಾನ ವಿರೋಧಿಗಳಲ್ಲ, ದೇಶ ವಿರೋಧಿಗಳಲ್ಲ. ನಮ್ಮ ಹೋರಾಟ ಸಂವಿಧಾನ ವಿರುದ್ಧ ಕೆಲಸ ಮಾಡುತ್ತಿರುವ ಅಧಿಕಾರಗಳ ನಡೆ ಖಂಡಿಸಿ, ಮೂಲಭೂತ ಸೌಕರ್ಯ ಕುಡಿಯುವ ನೀರು, ಕೆರೆಗಳ ಉಳಿವುಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.

ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡ ಸತೀಶ್ ಮಾತನಾಡಿ, ಜ.26 ರಂದು ಎರಡೂ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ಸಮಿತಿಯ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಪಡೆಯಲಾಗಿದೆ. ಸಹಿ ಸಂಗ್ರಹ ಮಾಡುವ ಮೂಲಕ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಸಲ್ಲಿಸಲಾಗಿದೆ. ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ಸಭೆ ನಡೆಸಿ ನೀಡಲಾಗಿದ್ದ ಯಾವುದೇ ಭರವಸೆಯು ಇದುವರೆಗೂ ಈಡೇರಿಲ್ಲ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯ ಕಚೇರಿಯನ್ನು ನಗರಕ್ಕೆ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉರುಳು ಸೇವೆ ಮಾಡಿದರು ಇದುವರೆಗೂ ಸ್ಥಳಾಂತರ ಆಗಿಲ್ಲ.ಇಂತಹ ಕನಿಷ್ಠ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಲ್ಲೂ ಸಹ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದ ಗಣರಾಜ್ಯೋತ್ಸವ ದಿನದಂದು ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲಾಗುವುದು ಎಂದರು.

ನಮ್ಮ ಭಾಗದಲ್ಲಿ ತಿಂಗಳಿಗೆ ಎರಡು‌ ಮೂರು ಸಾವುಗಳು ಆಗುತ್ತಿವೆ. ಈ ಸಾವು ಸಹಜವಾಗಿ ಬರುತ್ತಿಲ್ಲ. ಬದಲಿಗೆ ಕಿಡ್ನಿ‌ ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ಇದಕ್ಕೆ ಕಾರಣ ಅಶುದ್ಧ ಕುಡಿಯುವ ನೀರಿನಿಂದ, ಕೆರೆಗಳ ಮಾಲಿನ್ಯದಿಂದ ಎಂದರು.

ಪ್ರಮುಖ ಬೇಡಿಕೆಗಳು

*ದೊಡ್ಡಬಳ್ಳಾಪುರ ನಗರಸಭೆ ಯುಜಿಡಿ‌ ನೀರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ಯುಜಿಡಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಣಗೊಂಡು ಕೆರೆಗಳಿಗೆ ಬರುವಂತೆ ಮಾಡಬೇಕು

• ಅಂರ್ಜಲ ಹದಗೆಡದೇ ಇರುವ ಭಾಗದಿಂದ ಜನರಿಗೆ ಶುದ್ಧ ಕುಡಿಯುವ ನೀರು, ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು.

• ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಬೇಕು

• ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಕೈಗಾರಿಕೆಗಳ ತ್ಯಾಜ್ಯ ನೀರನ್ನು ಶುದ್ಧೀಕರಿಸಿಕೊಂಡು ಅವರೇ ಆ ನೀರನ್ನು ಕೆರೆಗಳಿಗೆ ಬಿಡದೇ ಮರುಬಳಿಕೆ‌ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು

ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಹೋರಾಟಗಾರರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

3 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago