ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ ಸುಮಾರು 10:15ರಲ್ಲಿ ದೊಡ್ಡಬಳ್ಳಾಪುರ ನಗರದ ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯ ಮಾನಸ ಆಸ್ಪತ್ರೆ ಎದುರು ನಡೆದಿದೆ…

ಮೃತನನ್ನು ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆ ನಿವಾಸಿ ರಾಜು (26) ಎಂದು ಗುರುತಿಸಲಾಗಿದೆ…

ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಭರಸಕ್ಕೆ ಬೈಕ್ ಕೆಳಗೆ ಬಿದ್ದಿದ್ದು, ಬಿದ್ದ ತಕ್ಷಣ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ…

ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಬೈಕ್ ಸವಾರರೇ ದಯವಿಟ್ಟು ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಿ ಸುರಕ್ಷಿತರಾಗಿರಿ ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ….

Leave a Reply

Your email address will not be published. Required fields are marked *

error: Content is protected !!