ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ ಸುಮಾರು 10:15ರಲ್ಲಿ ದೊಡ್ಡಬಳ್ಳಾಪುರ ನಗರದ ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯ ಮಾನಸ ಆಸ್ಪತ್ರೆ ಎದುರು ನಡೆದಿದೆ…
ಮೃತನನ್ನು ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆ ನಿವಾಸಿ ರಾಜು (26) ಎಂದು ಗುರುತಿಸಲಾಗಿದೆ…
ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಭರಸಕ್ಕೆ ಬೈಕ್ ಕೆಳಗೆ ಬಿದ್ದಿದ್ದು, ಬಿದ್ದ ತಕ್ಷಣ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ…
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಬೈಕ್ ಸವಾರರೇ ದಯವಿಟ್ಟು ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಿ ಸುರಕ್ಷಿತರಾಗಿರಿ ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ….
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…