ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಸಮೀಪದ ಮಾಚಗೊಂಡನಹಳ್ಳಿ ಬಳಿ ರಾತ್ರಿ 10ಗಂಟೆ ಸಮಯದಲ್ಲಿ ನಡೆದಿದೆ.
ಬಿಹಾರ ಮೂಲದ ಧರ್ಮೇಂದ್ರ ಕುಮಾರ್ ಗುಪ್ತಾ ಮೃತ ದುರ್ದೈವಿ. ಮಧ್ಯಪ್ರದೇಶ ಮೂಲದ ಆದಿತ್ಯಾ ಸಿಂಗ್ ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.
ಇಬ್ಬರು ಬಿರ್ಲಾ ಸೂಪರ್ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ ನಿಂದ ವಾಪಸ್ ಬರುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಾಯಾಳು ಬೈಕ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದ 112 ಪೊಲೀಸ್ ಸಿಬ್ಬಂದಿ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ರಾತ್ರಿ ವೇಳೆ ಭಾರೀ ಗಾತ್ರದ ವಾಹನಗಳನ್ನು ರಸ್ತೆ ಬದಿ ನಿಲುಗಡೆ ಮಾಡುವುದರಿಂದ ಈ ರೀತಿಯ ಅನಾಹುತಗಳು ಸಂಭವಿಸುತ್ತವೆ. ಈಗ ಮಳೆಗಾಲ ಇರುವುದರಿಂದ ಭಾರೀ ಗಾತ್ರದ ವಾಹನಗಳನ್ನು ರಸ್ತೆ ಬದಿ ನಿಲುಗಡೆ ಮಾಡದಂತೆ ಪೊಲೀಸ್ ಅಧಿಕಾರಿಗಳು ಎಚ್ಚರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…