ತೂಬಗೆರೆಯ ಸುಣ್ಣಗಟ್ಟಹಳ್ಳಿ ಬಳಿ ನಿಲ್ಲಸಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು 7 ಗಂಟೆಯಲ್ಲಿ ನಡೆದಿದೆ…..
ಮೃತ ಯುವಕನನ್ನು ತೂಬಗೆರೆ ಹೋಬಳಿಯ ಗಂಟಿಗಾನಹಳ್ಳಿ ಮೂಲದ ಚೆನ್ನಕೇಶವ (22) ಎಂದು ಗುರುತಿಸಲಾಗಿದೆ.
ಪಂಚರ್ ಆಗಿರುವ ಟ್ರ್ಯಾಕ್ಟರ್ ನನ್ನು ನಡು ರಸ್ತೆಯಲ್ಲೇ ನಿಲ್ಲಿಸಲಾಗಿತ್ತು. ಇದನ್ನು ಗಮನಿಸದ ಬೈಕ್ ಸವಾರ ಹಿಂಬದಿಯಿಂದ ನೇರವಾಗಿ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ಒದಗಿಬಂದಿದೆ….
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…..
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..