ಯಲ್ಲಾಪುರ: ಯಲ್ಲಾಪುರ ತಾಲೂಕಿನ ಹಿಟ್ಟಿನ ಬೈಲ ಬಳಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದೆ.
ಮೃತಪಟ್ಟವರನ್ನು ನೀಲವ್ವ ಯಲಗುರ್ದಪ್ಪ ಹರದೊಳ್ಳಿ (ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ), ಗಿರಿಜವ್ವ ಅಯ್ಯಪ್ಪ ಬೂದನ್ನವರ (ಬಾದಾಮಿ ತಾಲೂಕಿನ ಜಾಲಿಹಾಳ) ಹಾಗೂ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡ ರಮೇಶ್ ಚಂದಪ್ಪ ಕಿತ್ತಳಿ, ಅವರ ಮಗ ಚಿದಾನಂದ ಕಿತ್ತಳಿ, ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳಪ್ಪ ಹಳಬರ, ಮಲ್ಲಿಕಾರ್ಜುನ ಅಂದಲ, ದೇವಕಿ ಬೆಳ್ಳಿ, ಸಮೀರಾ ಬೇಗಂ ಹಾಗೂ ಶರೀಫಾ ಬೇಗಂ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಗಲಕೋಟ ಜಿಲ್ಲೆಯ ಅಮ್ಮಿನಗಡದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಿಟ್ಟಿನ ಬೈಲ ಬಳಿ ಯಾವುದೇ ರಸ್ತೆ ಸುರಕ್ಷಾ ಕ್ರಮವಿಲ್ಲದೆ, ಇಂಡಿಕೇಟರ್ ಹಾಕದೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದು ಮತ್ತು ಸುರಕ್ಷತೆ ಕ್ರಮವಿಲ್ಲದೆ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿದ್ದು ಘಟನೆಗೆ ಕಾರಣ ಎನ್ನಲಾಗಿದೆ. ಲಾರಿ ಮತ್ತು ಬಸ್ ಚಾಲಕ ಇಬ್ಬರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…