ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಮೂವರು ಪ್ರಯಾಣಿಕರು ಸಾವು, ಹಲವರಿಗೆ ಗಾಯ

ಯಲ್ಲಾಪುರ: ಯಲ್ಲಾಪುರ ತಾಲೂಕಿನ ಹಿಟ್ಟಿನ ಬೈಲ ಬಳಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತಪಟ್ಟವರನ್ನು ನೀಲವ್ವ ಯಲಗುರ್ದಪ್ಪ ಹರದೊಳ್ಳಿ (ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ), ಗಿರಿಜವ್ವ ಅಯ್ಯಪ್ಪ ಬೂದನ್ನವರ (ಬಾದಾಮಿ ತಾಲೂಕಿನ ಜಾಲಿಹಾಳ) ಹಾಗೂ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ರಮೇಶ್ ಚಂದಪ್ಪ ಕಿತ್ತಳಿ, ಅವರ ಮಗ ಚಿದಾನಂದ ಕಿತ್ತಳಿ, ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳಪ್ಪ ಹಳಬರ, ಮಲ್ಲಿಕಾರ್ಜುನ ಅಂದಲ, ದೇವಕಿ ಬೆಳ್ಳಿ, ಸಮೀರಾ ಬೇಗಂ ಹಾಗೂ ಶರೀಫಾ ಬೇಗಂ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗಲಕೋಟ ಜಿಲ್ಲೆಯ ಅಮ್ಮಿನಗಡದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್  ಹಿಟ್ಟಿನ ಬೈಲ ಬಳಿ ಯಾವುದೇ ರಸ್ತೆ ಸುರಕ್ಷಾ ಕ್ರಮವಿಲ್ಲದೆ, ಇಂಡಿಕೇಟರ್ ಹಾಕದೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದು ಮತ್ತು ಸುರಕ್ಷತೆ ಕ್ರಮವಿಲ್ಲದೆ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿದ್ದು  ಘಟನೆಗೆ ಕಾರಣ ಎನ್ನಲಾಗಿದೆ.  ಲಾರಿ ಮತ್ತು ಬಸ್ ಚಾಲಕ ಇಬ್ಬರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

22 minutes ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

3 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

18 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

21 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

23 hours ago