ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ  ನಡೆದಿದೆ.

ಅಪಘಾತದಲ್ಲಿ ದೊಡ್ಡಬೆಳವಂಗಲ ಸಮೀಪದ ಅಜ್ಜನಕಟ್ಟೆ ಗ್ರಾಮದ ಚಂದನ್ ಎಚ್ (23) ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಚೇತನ್ ಎಂಬ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಸಿನಿಮಾ ನೋಡಲು ಹೋದ ಕುಟುಂಬದ ಮನೆಗೆ ಕನ್ನ; 130 ಗ್ರಾಂ ಚಿನ್ನದೊಂದಿಗೆ ಸಿಕ್ಕಿಬಿದ್ದ ಕಳ್ಳ!

ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ…

38 minutes ago

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ……..

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…

7 hours ago

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

23 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

1 day ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

2 days ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

2 days ago