ನಿಗದಿತ ಸಮಯಕ್ಕೆ ಬಾರದ ಸಾರಿಗೆ ಬಸ್ ಗಳು: ಪ್ರಯಾಣಿಕರ ಪರದಾಟ: ಫೂಟ್ ಬೋರ್ಡ್ ನಲ್ಲಿ ನೇತಾಡುತ್ತಾ ಹೊರಟ ವಿದ್ಯಾರ್ಥಿಗಳು

ಬೇಡಿಕೆಗೆ ತಕ್ಕ ಸೂಕ್ತ ಬಸ್ ಗಳ ವ್ಯವಸ್ಥೆ ಇಲ್ಲ. ಗಂಟೆಗಟ್ಟಲೆ ಕಾದರೂ ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್ ಗಳು. ಆಗೊಮ್ಮೆ ಈಗೊಮ್ಮೆ ಬಸ್ ಬಂದರೂ ಹತ್ತಲು ಜಾಗ ಇರೋದಿಲ್ಲ. ಹೆಜ್ಜೆ ಇಡಲು ಜಾಗವಿರದೆ ಬಸ್ ಫುಲ್ ರಷ್ ಆಗಿರುತ್ತದೆ. ಪ್ರತಿ ಬಸ್ ಸ್ಟಾಪ್ ನಲ್ಲೂ ನೂರಾರು ಮಂದಿ ಪ್ರಯಾಣಿಕರು ಕಾದು ನಿಂತೇ ಇರುತ್ತಾರೆ. ಕೆಲವೊಂದು ಬಸ್ ಗಳ ಕಂಡಿಷನ್ ಸರಿ ಇಲ್ಲದೇ ಮಾರ್ಗ ಮಧ್ಯದಲ್ಲಿ ಕೆಟ್ಟು ನಿಲ್ಲುತ್ತವೆ. ಹೀಗೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿನ ಸಾರಿಗೆ ವ್ಯವಸ್ಥೆ ಇರುತ್ತದೆ….

ಇಂದು(ಸೋಮವಾರ) ಬೆಳಗ್ಗೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು, ಆಸ್ಪತ್ರೆ, ಸರ್ಕಾರಿ ಕಚೇರಿಗಳು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ತೆರಳಲು‌ ವೃದ್ಧರು, ರೋಗಿಗಳು, ಮಹಿಳೆಯರು, ಮಕ್ಕಳು ಸೇರಿತೆ ಇತರೆ ಪ್ರಯಾಣಿಕರು ಬಸ್ ಗಳಿಗಾಗಿ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ(ಮಲ್ಲೋಹಳ್ಳಿ ಕಾಲೋನಿ) ಬಸ್ ನಿಲ್ದಾಣದಲ್ಲಿ‌ ಕಾದು ನಿಂತಿದ್ದರು.

ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ಬಸ್ಸಿನಲ್ಲಿ ಫುಲ್ ರಷ್ ಇತ್ತು. ಕೆಲವರು ಸಮಯವಿಲ್ಲವೆಂದು ರಷ್ ಇದ್ದ ಬಸ್ ಹತ್ತಿ ಫುಟ್ ಬೋರ್ಡ್ ನಲ್ಲಿ‌ ನೇತಾಡುತ್ತಾ ಹೊರಟರೆ, ಇನ್ನು ಕೆಲವರು ಇನ್ನೊಂದು ಬಸ್ಸಿಗಾಗಿ ಕಾದು ಕುಳಿತ್ತಿದ್ದರು. ಹೀಗೆ ಪ್ರತಿನಿತ್ಯ ಬಸ್ಸಿಗಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಹಾಗೂ ಬೇಡಿಕೆಗೆ ತಕ್ಕಂತೆ ಬಸ್ ಗಳನ್ನು ರೋಡಿಗಿಳಿಸಬೇಕು ಎಂದು ಪ್ರಯಾಣಿಕರು ಕೋರಿದ್ದಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

9 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

14 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

16 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

19 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago