Categories: ಕೋಲಾರ

ನಿಗದಿತ ಸಮಯಕ್ಕೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ಬಿಡುಗಡೆಗೆ ಅಂಗನವಾಡಿ ನೌಕರರ ಒತ್ತಾಯ

ಕೋಲಾರ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸುವ ಜೊತೆಗೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು,

ನಗರದ ಪಾಲಸಂದ್ರಲೇಔಟ್ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಮಿತಿ ಸಭೆಯ ನಂತರ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ ಸರಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಬೇಕಾಗಿದೆ ಆದರೆ ಅವರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರ ಸರ್ಕಾರವು ಹಿಂದೆ ಬಿದ್ದಿದೆ ನೌಕರರ ಮತ್ತು ಸಿಬ್ಬಂದಿಯ ಯೋಗಕ್ಷೇಮಕ್ಕೆ ಅನುದಾನವನ್ನು ಕೊಡದೇ ನಿರ್ಲಕ್ಷ ವಹಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಂಗನವಾಡಿ ನೌಕರರಿಗೆ ಮೊಟ್ಟೆ, ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌, ಬಾಡಿಗೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಮಯಕ್ಕೆ ಸರಿಯಾಗಿ ನೀಡದೆ ಪ್ರತಿ ತಿಂಗಳು ಕಾರ್ಯಕರ್ತೆಯರು ಕೈಯಿಂದ ಭರಿಸುವಂತಾಗಿದೆ ಇದರಿಂದ ಸಾಕಷ್ಟು ತೊಂದರೆಯಾಗಿದೆ ರಾಜ್ಯ ಸರ್ಕಾರವು ನಿಗದಿತ ಪಿಂಚಣಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಅಂಗನವಾಡಿ ನೌಕರರಿಗೆ ಹಾಗೂ ಸಿಬ್ಬಂದಿಗೆ ಕೆಲಸಕ್ಕೆ ತಕ್ಕಂತೆ ವೇತನದ ಜೊತೆಗೆ ನಿವೃತ್ತಿ ನಂತರದ ಪಿಂಚಣಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಅಂಗನವಾಡಿ ನೌಕರರ ಸಂಘವು ಸಾಕಷ್ಟು ಬಾರಿ ಸಂಬಂಧಿಸಿದ ಇಲಾಖೆ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿದೆ ಅಂಗನವಾಡಿ ನೌಕರರಿಗೆ ಪ್ರತಿ ತಿಂಗಳು ಗೌರವ ಧನ, ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ನಿಗದಿತ ಸಮಯಕ್ಕೆ ಬಿಡುಗಡೆ ಮಾಡಬೇಕು ಮುಂಬಡ್ತಿ, ವರ್ಗಾವಣೆಗಳಲ್ಲಿ ರಾಜಕೀಯ ಮಾಡದೇ ನ್ಯಾಯಯುತವಾಗಿ ಆದೇಶ ನೀಡಬೇಕು ಗ್ರಾಚೂಟಿ ಜಾರಿಯಾಗಬೇಕು. ನಿವೃತ್ತಿಯಾದವರಿಗೆ ತಕ್ಷಣ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಸುಮಾರು ವರ್ಷಗಳಿಂದ ಬಾಕಿ ಉಳಿದ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಅಂಜಲಮ್ಮ, ಪ್ರಧಾನ ಕಾರ್ಯದರ್ಶಿ ಎನ್ ಕಲ್ಪನಾ, ಉಪಾಧ್ಯಕ್ಷರಾದ ಶಿಳ್ಳಂಗೆರೆ ರಾಜಮ್ಮ, ಜಯಲಕ್ಷ್ಮಿ, ಲೋಕೇಶ್ವರಿ, ವೆಂಕಟಲಕ್ಷ್ಮೀ, ಲಕ್ಷ್ಮೀದೇವಿ, ಸಹ ಕಾರ್ಯದರ್ಶಿ ಗಾಂಧಿನಗರ ಮಂಜುಳ, ಮುಖಂಡರಾದ ಪುಷ್ಪ, ಮಮತಾ ಮುಂತಾದವರು ಇದ್ದರು.

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

2 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

15 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

17 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

20 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

23 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

24 hours ago