Categories: ರಾಜ್ಯ

ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಶಾಸಕರನ್ನು ಪರಿಗಣಿಸಲಾಗುವುದು- ಸಿಎಂ ಸಿದ್ದರಾಮಯ್ಯ

ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಪ್ರತಿಕ್ರಿಯಿಸಿದರು.

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.

ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಎನ್.ಆರ್.ಜಿ.ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವಂತೆ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ.

ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದರು.

ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ ಎಂದು ತಿಳಿಸಿದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

6 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

19 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

20 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

22 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

23 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago