ಯಲಹಂಕ: ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 12 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ 1281 ವಿದ್ಯಾರ್ಥಿಗಳು ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಹಾಗೂ ಮಾಸ್ಟರ್ಸ್ ಪದವಿ ಪಡೆದರು.
ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಅವರಣದಲ್ಲಿ 12 ನೇ ಘಟಿಕೋತ್ಸವ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು, ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿಶ್ವವಿದ್ಯಾಲಯದ ಕುಲಪತಿಗಳಾದ ಡಾ॥ವಿದ್ಯಾಶಂಕರ್ ಎಸ್, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ ಎನ್,ಆರ್, ಶೆಟ್ಟಿ ಮತ್ತು ನಿಟ್ಟೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಭಾಗವಹಿಸಿದರು.
ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕದೊಂದಿಗೆ ಪದವಿ ವಿತರಣೆ ಮಾಡಲಾಯಿತು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಚಂದ್ರಶೇಖರ್ ಎಲ್ ಪ್ರತಿಷ್ಠಿತ ನಿಟ್ಟೆ ಗುಲಾಬಿಶೆಟ್ಟಿ ಸ್ಮರಣಾರ್ಥ ಚಿನ್ನದ ಪದಕ ಪಡೆದರು, ಅತ್ಯುತ್ತಮ ವಿದ್ಯಾರ್ಥಿನಿಗೆ ಸಲ್ಲುವ ನಿಟ್ಟೆ ಮೀನಾಕ್ಷಿ ಹೆಗ್ಡೆ ಸ್ಮರಣಾರ್ಥ ಚಿನ್ನದ ಪದಕ ಮೆಕ್ಯಾನಿಕ್ ಇಂಜಿನಿಯರಿಂಗ್ ವಿಭಾಗದ ಅಲಿನಿ ಕ್ರೈಸ್ಟ್ ಪೌಲ್ ಪಡೆದರು, ಅತ್ಯುತ್ತಮ ವಿದ್ಯಾರ್ಥಿಗೆ ಸಲ್ಲುವ ಜಸ್ಟಿಸ್ ಕೆ.ಎಸ್. ಹೆಗ್ಡೆ ಸ್ಮರಣಾರ್ಥ ಚಿನ್ನದ ಪದಕವನ್ನ ಕಂಪ್ಯೂಟರ್ ಸೈನ್ಸ್ ವಿಭಾಗದ ಕರಣ್ ಆರ್ ಪಡೆದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…