ದೊಡ್ಡಬಳ್ಳಾಪುರ, (ಏ.28); ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿಯ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿಯೋರ್ವರು ಯಶಸ್ವಿಯಾಗಿದ್ದಾರೆ.
ಸುಮಾರು 50 ಅಪರಿಚಿತ ವ್ಯಕ್ತಿ ಏಪ್ರಿಲ್ 26 ರಿಂದ ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಬಿದ್ದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಎನ್ನಲಾಗಿದೆ.
ಈ ವಿಷಯ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಅವರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಈ ಕುರಿತು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ರೂಪೇಶ್ ಯಾದವ್ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದು, ಇಬ್ಬರ ಶ್ರಮದ ಪರಿಣಾಮ ಆತ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.
ಸತತ ಎರಡು ದಿನಗಳಿಂದ ಅನ್ನ ಆಹಾರವಿಲ್ಲದೆ ಬಿದ್ದಿದ್ದ ವ್ಯಕ್ತಿ ಸಾವಿನ ಕದ ತಟ್ಟಿದ್ದು ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಅವರ ಜನ ಪರ ಕಾಳಜಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಲಿ ಸಿದ್ದನಾಗುತ್ತಿದ್ದನೆ.
ಮದ್ಯ ವ್ಯಸನದಿಂದಾಗಿ ನಗರದಲ್ಲಿ ಈ ರೀತಿ ಸಾವಿನ ಕದ ತಟ್ಟುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಚಿಂತಿಸುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆಗಳ ನೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…