ನಿಧಿಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಪಾಪಿ ತಂದೆಯೊಬ್ಬ ಮುಂದಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಸದ್ದಾಂ ಎಂಬ ವ್ಯಕ್ತಿ ಹೆತ್ತ ಮಗುವನ್ನ ಬಲಿ ಕೊಡುವುದಕ್ಕೆ ಪತ್ನಿಗೆ ಸದಾ ಕಿರುಕುಳ ಕೊಡುತ್ತಿದ್ದ ಎನ್ನಲಾಗಿದೆ.
ಸದ್ದಾಂ ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾಗಿರುತ್ತಾನೆ. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗುವನ್ನ ಬಲಿ ಕೊಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ತಡರಾತ್ರಿ ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದ. ಸೈಕೋಪಾಥ್ ಪತಿಯ ಕಿರುಕುಳಕ್ಕೆ ಬೇಸತ್ತು ಸಂತ್ರಸ್ತೆ ದೂರು ಕೊಟ್ಟಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ಮಹಿಳೆ ದೂರು ನೀಡಿದ್ದಾರೆ.
ಸದ್ಯ ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.