ಚಿಂತಾಮಣಿ: ಹಣಕಾಸಿನ ವಿಚಾರಕ್ಕೆ ಬಾರ್ ಕ್ಯಾಶಿಯರ್ ಹಾಗೂ ಮತ್ತೊಂದು ವ್ಯಕ್ತಿ ನಡುವೆ ಆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಇಂದು ಮಧ್ಯಾಹ್ನ ಚಿಂತಾಮಣಿ ನಗರದಲ್ಲಿ ನಡೆದಿದೆ.
ತಾಲೂಕಿನ ಚಿಲಕಲನೇರ್ಪು ಹೋಬಳಿ ಬುಡುಗುಂಟೆ ಗ್ರಾಮದ ಚಲಪತಿ ರವರ ಪುತ್ರ ಹೇಮಂತ್ ಕುಮಾರ್ (25), ಗುರುವಾರ ರಾತ್ರಿ ಹಣಕಾಸಿನ ವಿಚಾರಕ್ಕೆ ಆರ್.ಆರ್ ಬಾರ್ ಕ್ಯಾಶಿಯರ್ ನಡುವೆ ಗಲಾಟೆಯಾಗಿದೆ.
ಪುನಃ ಮತ್ತೆ ಇಂದು(ಶುಕ್ರವಾರ) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿ ಆರ್ ಆರ್ ಬಾರ್ ಸಮೀಪವಿರುವ ಹೆಚ್.ಪಿ ಪೆಟ್ರೋಲ್ ಬಂಕ್ ನ ಕೊಠಡಿ ಒಂದರಲ್ಲಿ ಹೇಮಂತ್ ಕುಮಾರ್ ನನ್ನು ಬರ್ಬರಯಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕೊಲೆಯಾದ ಹೇಮಂತ್ ಒಂದು ವರ್ಷಗಳ ಹಿಂದೆ ಇದೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ.
ಇನ್ನು ಘಟನಾ ಸ್ಥಳಕ್ಕೆ ನಗರ ಠಾಣೆಯ ಆರಕ್ಷಕ ನಿರೀಕ್ಷಕರಾದ ರಂಗಶಾಮಯ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…