Categories: ಕೋಲಾರ

ನಿಮ್ಮ ಸೇವೆ ಮಾಡಲು ಒಂದು ಅವಕಾಶ ಕೊಡಿ-ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಮದನ್ ಪಟೇಲ್ ಮನವಿ

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಇಚ್ಚಿಸಿದ್ದು, ನಿಮ್ಮ ಸೇವೆ ಮಾಡಲು ಬಂದಿದ್ದೇನೆ ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಮದನ್ ಪಟೇಲ್ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸೇರಿದವನು ಆಗಿದ್ದು, ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಲಕ್ಷದಷ್ಟು ಬಲಗೈ ಸಮುದಾಯವಿದ್ದು, ಇದುವರೆವಿಗೂ ಬಲಗೈ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ, ಈ ಬಾರಿ ಪಕ್ಷದ ಹೈಕಮಾಂಡ್ ನಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ಆಗುತ್ತಿದ್ದು, ಜಾತಿಯ ಬಲಗೈ ಸಮುದಾಯಕ್ಕೆ ಸೇರಿದ ನನಗೆ ಒಂದು ಅವಕಾಶ ಕೊಟ್ಟರೆ ಜಿಲ್ಲೆಯ, ರಾಜ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡರ ಬೆಂಬಲ ಹಾಗೂ ಮಾರ್ಗದರ್ಶನದಲ್ಲಿ ಗೆಲುವು ಖಂಡಿತ ಸಾಧಿಸಲು ಬಹಳಷ್ಟು ಅವಕಾಶಗಳು ಇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಸರಿಯಾದ ರೀತಿಯಲ್ಲಿ ಕೈಗಾರಿಕಗಳು ಇಲ್ಲವಾಗಿದ್ದು ಉದ್ಯೋಗಕ್ಕಾಗಿ ಹೊರಗಡೆ ಹೋಗಬೇಕಾಗಿದೆ. ಸರಿಯಾದ ಸಮರ್ಪಕ ರಸ್ತೆಗಳು ಸೇರಿದಂತೆ ನನ್ನದೇ ಆದ ಜಿಲ್ಲೆಯ ಅಭಿವೃದ್ಧಿಗಾಗಿ ಕನಸುಗಳಿವೆ ಎಂದು ತಿಳಿಸಿದರು

ರಾಜ್ಯದಲ್ಲಿ ಸಿನಿಮಾ ಸಂಗೀತ, ನಾಟಕ ನಿರ್ದೇಶಕನಾಗಿ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದೇನೆ. ಜೊತೆಗೆ ಸುಮಾರು 1980ರ ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು, ಕೋಲಾರ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ವಿಧಾನಸಭೆ, ಲೋಕಸಭಾ ಚುನಾವಣೆಗಳು ಸೇರಿದಂತೆ ಪ್ರತಿಯೊಂದು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದರು.

ದೇಶದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಜನಪ್ರಿಯ ಸಾಲಮೇಳ ಕಾರ್ಯಕ್ರಮಗಳಲ್ಲಿ ಮತ್ತು ಸಾಧನ ಸಮಾವೇಶಗಳಲ್ಲಿ ತಮ್ಮ ತಂಡದೊಂದಿಗೆ ಪ್ರಚಾರ ಕಾರ್ಯದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. 1991 ಮೇ 10ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುವವರೆಗೆ ತಮ್ಮ ತಂಡದೊಂದಿಗೆ ಪ್ರಚಾರ ಗೀತೆ ಕಾರ್ಯಕ್ರಮ ನಡೆಸಿದ್ದನ್ನು ಅವತ್ತು ಸತಃ ರಾಜೀವ್ ಗಾಧಿಯವರು ಬೆನ್ನು ತಟ್ಟಿ ಶ್ಲಾಘನೆ ಮಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ನನ್ನ ಸೇವೆಯನ್ನು ಗುರುತಿಸಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ವರಿಷ್ಠರನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅನೇಕಲ್ ಕೃಷ್ಣಪ್ಪ, ಲಕ್ಷೀನರಸಿಂಹಯ್ಯ, ಹಾರೋಹಳ್ಳಿ ಮಂಜುನಾಥ್ ಇದ್ದರು

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

11 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

17 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

21 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

23 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

2 days ago