ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ…ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಎಂದಿದ್ದಾರೆ.
ಡೂಪ್ಲಿಕೇಟ್ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ..? ಎಂದು ಪ್ರಶ್ನೆ ಮಾಡಿದ್ದಾರೆ.
ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್ ಇನಸ್ಪೆಕ್ಟರ್ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಕೇಳಿದ್ದಾರೆ.
ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದಿದ್ದಾರೆ.
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ & ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಹೇಳಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…