ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಾಂಪೌಂಡ್ ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಬೀರಸಂದ್ರ ಬಳಿ ನಡೆದಿದೆ.
ಡಿಕ್ಕಿ ರಸಭಸಕ್ಕೆ ಹೊಸಕೋಟೆಯಿಂದ ತಿಪಟೂರಿಗೆ ಮದುವೆಗೆ ತೆರಳುತ್ತಿದ್ದ ಐವರು ಯುವಕರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಐವರು ಯುವಕರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.