ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ 2023-24ನೇ ಸಾಲಿಗೆ ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ “ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ” ಅರ್ಜಿ ಆಹ್ವಾನಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಬರುವ ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲ್ಯೂ ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲ್ಯೂ ಗಳಿಂದ ನಿಗಧಿತ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 25ರ ಒಳಗಾಗಿ ಸಲ್ಲಿಸಲು ಕೋರಿದೆ.
ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ವಿವರ.
1. ಅರ್ಜಿಯೊಂದಿಗೆ ಎಲ್ಲಾ ದಾಖಲಾತಿಗಳ ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು.
2. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಕಾರ್ಡ್.
3. ಆದಾಯ ಪ್ರಮಾಣ ಪತ್ರ (ರೂ 11.500 ಮಿತಿಗೊಳಪಟ್ಟು) ಬಿ.ಪಿ.ಎಲ್, ಪಡಿತರ ಕಾರ್ಡ್.
4. ವಾಸಸ್ಥಳ ಪ್ರಮಾಣ ಪತ್ರ (ಕನಿಷ್ಠ ಹಿಂದಿನ 10 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರುವ ಕುರಿತು ಸಂಬಂದಪಟ್ಟ ತಹಶೀಲ್ದಾರ ರವರಿಂದ ಪಡೆದಿರಬೇಕು).
5. ವಿಕಲಚೇತನ ವ್ಯಕ್ತಿಯ ಪೊಟೋ-1.
6. ಬ್ಯಾಂಕ್ ಪಾಸ್ ಪುಸ್ತಕ (ಅಂಚೆ ಕಛೇರಿ ಪಾಸ್ ಪುಸ್ತಕ ಹೊರತುಪಡಿಸಿ).
7. ಈಗಾಗಲೇ ಸದರಿ ಯೋಜನೆಯಡಿ ನೊಂದಾಯಿತರಲ್ಲದ ಬಗ್ಗೆ ದೃಢೀಕರಣ ಪತ್ರ.
8. ಫಲಾನುಭವಿಯ ಪಾಲಕರು/ಪೋಷಕರ ಹೆಸರು ಮತ್ತು ವಿಳಾಸ.
9. ಫಲಾನಿಭವಿಯ ವಿದ್ಯಾರ್ಹತೆ ಕುರಿತು ದೃಢೀಕರಣ (ಲಭ್ಯವಿದ್ದಲ್ಲಿ).
10. ನಿಗಧಿತ ಅರ್ಜಿ ನಮೂನೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮಟ್ಟದ ವಿಕಲಚೇತನರ ನೋಡಲ್ ಅಧಿಕಾರಿಗಳನ್ನು ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ-03 ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ 080-29787441 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…