ನಿರಾಮಯ ಆರೋಗ್ಯ ವಿಮಾ ಯೋಜನೆ ಅನುಷ್ಠಾನ: ಜಿಲ್ಲಾ ನೋಡಲ್ ಸಂಸ್ಥೆ ಆಯ್ಕೆಗೆ ಪ್ರಸ್ತಾವನೆ ಸಲ್ಲಿಸಿ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾ ನೋಡಲ್ ಸಂಸ್ಥೆಯನ್ನು ಆಯ್ಕೆ ಮಾಡಬೇಕಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ನ್ಯಾಷನಲ್ ಟ್ರಸ್ಟ್-1999 ಆಕ್ಟ್ ಅಡಿ ನೋಂದಾಯಿತವಾಗಿರುವ ಬಗ್ಗೆ ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 25ರೊಳಗೆ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ-03 ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ 080-29787441 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

52 minutes ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

2 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

8 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

9 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

14 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago