ನಿರಾಮಯ ಆರೋಗ್ಯ ವಿಮಾ ಯೋಜನೆ ಅನುಷ್ಠಾನ: ಜಿಲ್ಲಾ ನೋಡಲ್ ಸಂಸ್ಥೆ ಆಯ್ಕೆಗೆ ಪ್ರಸ್ತಾವನೆ ಸಲ್ಲಿಸಿ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾ ನೋಡಲ್ ಸಂಸ್ಥೆಯನ್ನು ಆಯ್ಕೆ ಮಾಡಬೇಕಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ನ್ಯಾಷನಲ್ ಟ್ರಸ್ಟ್-1999 ಆಕ್ಟ್ ಅಡಿ ನೋಂದಾಯಿತವಾಗಿರುವ ಬಗ್ಗೆ ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 25ರೊಳಗೆ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ-03 ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ 080-29787441 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಹಳ್ಳಿ ಸಮೀಪ ಕರಡಿ ಪ್ರತ್ಯಕ್ಷ: ಉಜ್ಜಿನಿಯಲ್ಲಿ ಚಿರತೆಗಳ ಬೆನ್ನಲ್ಲೇ ಕರಡಿ ಪ್ರತ್ಯಕ್ಷ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಸಮೀಪ ಇಂದು ಮಧ್ಯಾಹ್ನ ಕರಡಿಯೊಂದು ಕಾಣಿಸಿಕೊಂಡಿದ್ದು, ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಚಿರತೆ ಕಂಡು ಭಯಭೀತರಾದ…

8 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ರೋಚಕ ಹಣಾಹಣಿ: ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್‌ಗೆ‌ ಜಯ: 1,857 ಮತಗಳು ಅಸಿಂಧು

ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ಎ.ಪಿ. ರಂಗನಾಥ್…

9 hours ago

ದೊಡ್ಡಬಳ್ಳಾಪುರ ಕ್ಷೇತ್ರದ ಮತದಾರರ ಪಟ್ಟಿ ಫೈನಲ್‌:ದೊಡ್ಡಬಳ್ಳಾಪುರದಲ್ಲಿ 1.94 ಲಕ್ಷ ಮತದಾರರು: 31,172 ಮತದಾರರ ಹೆಸರು ಡಿಲೀಟ್‌

ದೊಡ್ಡಬಳ್ಳಾಪುರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.…

10 hours ago

ವೀರಾಪುರ ರಸ್ತೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ನಗರದ ವೀರಾಪುರ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್ ಎದುರಿನ ನಿರ್ಜನ‌ ಪ್ರದೇಶದಲ್ಲಿನ ರಾಜಕಾಲುವೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ…

18 hours ago

ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು: 10 ಲಕ್ಷ ಮೌಲ್ಯದ ಸ್ಫೋಟಕ ವಸ್ತುಗಳ ವಶ: ಏಳು ಮಂದಿ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು…

19 hours ago

ಫಾಕ್ಸ್‌ಕಾನ್ ಕಂಪನಿ ಬಸ್‌– ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ: ಮಕ್ಕಳು ಪಾರು

ದೊಡ್ಡಬಳ್ಳಾಪುರ: ಫಾಕ್ಸ್‌ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೀತಂ ವಿಶ್ವವಿದ್ಯಾಲಯದ…

20 hours ago