ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.

ಹಾಡೋನಹಳ್ಳಿಯ ಖಾಸಗಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು. ಹುಡುಕಾಟ ನಡೆಸಿದ್ದು ಸುಮಾರು 5 ದಿನಗಳ ಮಗುವನ್ನು ರಕ್ಷಿಸಿ, ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದರು.

ಅಧಿಕಾರಿಗಳು ಮಗುವನ್ನು ವಶಕ್ಕೆ ಪಡೆದು, ನಗರದ ತಾಯಿ-ಮಗು ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ನಿತ್ರಾಣವಾಗಿದ್ದ ಮಗುವಿಗೆ ಸೂಕ್ತ ಆರೈಕೆ, ಚಿಕಿತ್ಸೆ ನೀಡಿದ ಸರ್ಕಾರಿ ತಾಯಿ ಮಗು ಆಸ್ಪತ್ರೆ ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ಮಗುವಿನ ಜೀವ ಉಳಿಸಿದ್ದಾರೆ.

ನವಜಾತ ಗಂಡು ಮಗು 1 ಕೆ.ಜಿ 800 ಗ್ರಾಂ ತೂಕವಿದ್ದು, ಮಗುವಿನ ಜೀವ ಉಳಿಸುವುದು ಸವಾಲಿನ ಕಾರ್ಯವಾಗಿತ್ತು. ಆಸ್ಪತ್ರೆಯಲ್ಲಿ ಪ್ರಸೂತಿಯಾಗಿದ್ದ ತಾಯಂದಿರಿಗೆ ಮನವಿ ಮಾಡಿ ಮಗುವಿಗೆ ಹಾಲುಣಿಸಲು ಒಪ್ಪಿಸಿದ್ದು, ಜೊತೆ ಪೌಡ‌ರ್ ಹಾಲನ್ನು ಕೂಡ ಮಗುವಿಗೆ ಕುಡಿಸಲಾಗುತ್ತಿದೆ ಎಂದು ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ತಿಳಿಸಿದರು.

ಕಳೆದ ಒಂದು ವಾರದಿಂದ ಹಾರೈಕೆ ಮಾಡಿದ ವೈದ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ದತ್ತು ಕೇಂದ್ರದ ಕಾರ್ಯಕರ್ತೆ ಹೇಮಾ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸುವ ಅಧಿಕಾರಿಗಳು ದತ್ತು ಪಡೆಯಲು ಅರ್ಜಿ ಸಲ್ಲಿಸಿರುವ ಪೋಷಕರಿಗೆ ಈ ಮಗುವನ್ನು ಹಸ್ತಾಂತರ ಮಾಡಲಿದ್ದಾರೆ.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

8 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

14 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

18 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

20 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago