
ನಿರ್ಜನ ಪ್ರದೇಶದಲ್ಲಿ ನವಜಾತ ಹಸಗೂಸು ಪತ್ತೆಯಾಗಿರುವ ಘಟನೆ ಹಾಡೋನಹಳ್ಳಿ ಹಾಗೂ ತಿರುಮಗೊಂಡನಹಳ್ಳಿ ಸಮೀಪವಿರುವ ಖಾಲಿ ಲೇಔಟ್ ನಲ್ಲಿ ಕಳೆದ ರಾತ್ರಿ ಸುಮಾರು 8 ಗಂಟೆಯಲ್ಲಿ ಪತ್ತೆಯಾಗಿದೆ.
ಲೇಔಟ್ ನಲ್ಲಿ ಮಗು ಅಳುತ್ತಿರುವ ಶಬ್ಧ ಸಾರ್ವಜನಿಕರ ಕಿವಿಗೆ ಬಿದ್ದಿದೆ. ಕೂಡಲೇ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದಾಗ ಮಗು ಪತ್ತೆಯಾಗಿದೆ. ಸದ್ಯ ವಾರದ ಹಿಂದೆ ಜನಿಸಿದ ಗಂಡು ಮಗುವನ್ನು ಯಾರೋ ಬಿಟ್ಟು ಹೋಗಿರಬಹುದು ಎಂದು ತಿಳಿದುಬಂದಿದೆ.
ಕೂಡಲೇ ಮಗುವನ್ನು ತಿರುಮಗೊಂಡನಹಳ್ಳಿ ಯುವಕರು ರಕ್ಷಣೆ ಮಾಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿ ರಕ್ಷಣೆ ಮಾಡಲಾಗಿದೆ. ಮಗುವಿಗೆ ಯಾವುದೇ ಪ್ರಾಣಾಪಾಯವಿಲ್ಲ. ಮಗುವಿನ ತಂದೆ-ತಾಯಿ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….