ನಿರ್ದೇಶಕ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ವಿವಾಹ

ನಟಿ ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ಸೋಮವಾರ ಬೆಳಿಗ್ಗೆ ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಶನ್‌ನ ಲಿಂಗ ಭೈರವಿ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ.

ಈ ಕುರಿತು ಸಮಂತಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದು, 🤍01.12.2025🤍 ಎಂದು ಬರೆದುಕೊಂಡಿದ್ದಾರೆ. ಸಮಂತಾ ಪೋಸ್ಟ್‌ಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸೇರಿದಂತೆ ಹಲವಾರು ಮಂದಿ ಶುಭಾಶಯ ಕೋರಿದ್ದಾರೆ.

ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಇಬ್ಬರಿಗೂ ಇದು ಎರಡನೇ ಮದುವೆ. ಸಮಂತಾ ಈ ಹಿಂದೆ ನಟ ನಾಗ ಚೈತನ್ಯ ಅವರನ್ನು ವಿವಾಹವಾಗಿದ್ದರು ಮತ್ತು 2021 ರಲ್ಲಿ ವಿಚ್ಛೇದನ ಪಡೆದರು. ರಾಜ್ ನಿಡಿಮೋರು 2015 ರಲ್ಲಿ ಶ್ಯಾಮಲಿ ದೇ ಅವರನ್ನು ವಿವಾಹವಾಗಿದ್ದರು. ಇಬ್ಬರ ನಡುವಿನ ಸಂಬಂಧವು 2024ರ ಆರಂಭದಲ್ಲಿ ಬಹಿರಂಗಗೊಂಡಿತ್ತು. ʻದಿ ಫ್ಯಾಮಿಲಿ ಮ್ಯಾನ್‌ 2’ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!