ನಟಿ ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ಸೋಮವಾರ ಬೆಳಿಗ್ಗೆ ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಶನ್‌ನ ಲಿಂಗ ಭೈರವಿ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ.
ಈ ಕುರಿತು ಸಮಂತಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದು, 🤍01.12.2025🤍 ಎಂದು ಬರೆದುಕೊಂಡಿದ್ದಾರೆ. ಸಮಂತಾ ಪೋಸ್ಟ್‌ಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸೇರಿದಂತೆ ಹಲವಾರು ಮಂದಿ ಶುಭಾಶಯ ಕೋರಿದ್ದಾರೆ.
ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಇಬ್ಬರಿಗೂ ಇದು ಎರಡನೇ ಮದುವೆ. ಸಮಂತಾ ಈ ಹಿಂದೆ ನಟ ನಾಗ ಚೈತನ್ಯ ಅವರನ್ನು ವಿವಾಹವಾಗಿದ್ದರು ಮತ್ತು 2021 ರಲ್ಲಿ ವಿಚ್ಛೇದನ ಪಡೆದರು. ರಾಜ್ ನಿಡಿಮೋರು 2015 ರಲ್ಲಿ ಶ್ಯಾಮಲಿ ದೇ ಅವರನ್ನು ವಿವಾಹವಾಗಿದ್ದರು. ಇಬ್ಬರ ನಡುವಿನ ಸಂಬಂಧವು 2024ರ ಆರಂಭದಲ್ಲಿ ಬಹಿರಂಗಗೊಂಡಿತ್ತು. ʻದಿ ಫ್ಯಾಮಿಲಿ ಮ್ಯಾನ್ 2’ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…