
ನಗರದ ಕುಂಬಾರಪೇಟೆಯಲ್ಲಿರುವ ಮೌಂಟ್ ಹೀರಾ ಪ್ರೌಢ ಶಾಲೆ ಹಾಗೂ ವಿಸ್ಡಂ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಿರ್ಮಾಣ ಹಂತದ ಶಾಲಾ ಕಟ್ಟಡ ಮೇಲಿಂದ ಮೂರ್ನಾಲ್ಕು ಹಾಲೋ ಬ್ರಿಕ್ ಇಟ್ಟಿಗೆಗಳು ತರಗತಿ ಒಳಗಡೆ ಬಿದ್ದು ಕೆಲ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಫ್ರಿನ್, ರಖೀಬಾ, ರುಖ್ಯಾಯಾ ಎಂಬ ಹತ್ತನೇ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಬೆಳಗ್ಗೆ ಎಂದಿನಂತೆ ತರಗತಿಗಳು ಪ್ರಾರಂಭವಾಗಿದ್ದವು, ಮಳೆಗೆ ತೋಯ್ದ ಸಿಮೆಂಟ್ ಇಟ್ಟಿಗೆಗಳು ದಿಢೀರನೆ ಪಾಠ ಕೇಳುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ.
ಸ್ಥಳಕ್ಕೆ ನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ನಡೆದು ಹಲವು ಗಂಟೆಗಳು ಕಳೆದರೂ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಂದು ಪರಿಶೀಲನೆ ನಡೆಸಿಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….