ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೊಲೆ ಆಗಿದೆ ಎಂದು ವರದಿಯಾಗಿದೆ.
ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿ ಅವರೇ ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಪೊಲೀಸರು ಸಂಶಯವ್ಯಕ್ತಪಡಿಸಿದ್ದಾರೆ.
ಬಿಹಾರದ ಚಂಪಾರಣ್ ಮೂಲದವರಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು.
ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
ಓಂ ಪ್ರಕಾಶ್ ಅವರು ಕರ್ನಾಟಕ ಗೃಹರಕ್ಷಕದಳ, ಅಗ್ನಿಶಾಮಕದಳಗಳಲ್ಲಿ ಮಹಾನಿರ್ದೇಶಕರಾಗಿದ್ದ ಅವರು, 2015ರಿಂದ 2017ರವರೆಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.
ಬೆಂಗಳೂರಿನಲ್ಲಿ ನಿವೃತ್ತ DG ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂಪ್ರಕಾಶ್ ಪತ್ನಿ ಪಲ್ಲವಿ ವಶಕ್ಕೆ ಪಡೆದು ಡಿಸಿಪಿ ಸಾ.ರಾ ಫಾತೀಮಾ ಅವರಿಂದ ವಿಚಾರಣೆ ಮಾಡಲಾಗುತ್ತಿದೆ.
ಸದ್ಯ ಓಂಪ್ರಕಾಶ್ ಕೊಲೆಗೆ ಬಳಸಿದ್ದ ಚಾಕು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪತ್ನಿ ಪಲ್ಲವಿಯೇ ಓಂಪ್ರಕಾಶ್ ಜೊತೆ ಜಗಳವಾಡಿ ಚಾಕುವಿನಿಂದ ಚುಚ್ಚಿಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
ಓಂಪ್ರಕಾಶ್ ಅವರು ಇತ್ತಿಚಿಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಪ್ರತಿದಿನ ಪತಿ ಹಾಗು ಪತ್ನಿ ನಡುವೆ ಜಗಳ ನಡೆಯುತ್ತಿತ್ತು, ಪ್ರತಿದಿನ ಮನೆಗೆ ಹೊಯ್ಸಳ ಸಿಬ್ಬಂದಿ ಹೋಗಿ ಸಮಾಧಾನ ಮಾಡಿ ಬರುತ್ತಿದ್ದರು ಎನ್ನಲಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…