ನಿವೃತ್ತ ಯೋಧನಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ

ಕಳೆದ 20‌ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.

ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.

ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್‌ಪಿಎಫ್‌ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ‌ ಮರಳಿದ‌ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ‌ ಕರೆತರಲಾಯಿತು.

ಮಗನನ್ನು ಸ್ವಾಗತಿಸಲು ತಂದೆ, ತಾಯಿ, ಸಹೋದರಿಯರು, ಮಕ್ಕಳು ಸೇರಿದಂತೆ ಕುಟುಂಬದವರು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗೆಳೆಯರ ಬಳಗವೇ ತ್ರಿವರ್ಣ ಧ್ವಜಗಳನ್ನು ಹಿಡಿದು ಹಾರ ತುರಾಯಿಗಳಿಂದ ಬರಮಾಡಿಕೊಂಡರು.

ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್‌ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.

ಅನಂತ ರಾಜಗೋಪಾಲ್ ಅವರು ಸಿಆರ್‌ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.

ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

11 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

12 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

13 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

17 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

18 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

19 hours ago