ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಲೂಕಿನ ಭೂಮೇನಹಳ್ಳಿಯಲ್ಲಿ ಗಣೇಶೋತ್ಸವದ ಅಂಗವಾಗಿ ಸೆಪ್ಟೆಂಬರ್ 17ರಂದು ಗಣೇಶ ವಿಸರ್ಜನೆ ಮೆರವಣಿಗೆ ನಡೆಸಲಾಗಿತ್ತು. ಮೆರವಣಿಗೆಯಲ್ಲಿ ಡಿಜೆ ಬಳಕೆ ಮಾಡುತ್ತಿರುವುದು ಗಸ್ತಿನಲ್ಲಿದ್ದ ಪೊಲೀಸರ ಗಮನಕ್ಕೆ ಬಂದಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಡಿಜೆ ವಾಹನವನ್ನು ಜಪ್ತಿ ಮಾಡಿದ್ದಾರೆ.

ಮೆರವಣಿಗೆಗೆ ಅಗತ್ಯ ಅನುಮತಿ ಪಡೆಯಲಾಗಿರಲಿಲ್ಲ ಎಂಬ ಮಾಹಿತಿಯೂ ಪೊಲೀಸರಿಗೆ ಲಭ್ಯವಾಗಿದೆ. ಡಿಜೆ ಬಳಕೆ ಹಾಗೂ ಅನುಮತಿ ಇಲ್ಲದೆ ಮೆರವಣಿಗೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!