Categories: ರಾಜ್ಯ

ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಪಡೆ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಬೀಳುತ್ತೆ ಕೇಸ್‌

 

ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ ಎನ್ನುವಾಗಲೇ ಮಾರುಕಟ್ಟೆಗಳಲ್ಲಿ ಪಟಾಕಿಗಳ ಖರೀದಿ ಭರಾಟೆ ಶುರುವಾಗಿದೆ. ರಾಜ್ಯ ಸರ್ಕಾರದ ಆದೇಶ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನಿರ್ದೇಶನದನ್ವಯ ರಾಜ್ಯ ಪೊಲೀಸರು ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಇತರ ಪಟಾಕಿಗಳ ಮಾರಾಟ, ಪೂರೈಕೆ ಮೇಲೆ ರಾಜ್ಯದೆಲ್ಲೆಡೆ ನಿಗಾ ಇರಿಸಿದ್ದಾರೆ.

ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಪಟಾಕಿ ವಹಿವಾಟು ನಡೆಸಲು ವ್ಯಾಪಾರಿಗಳು ಸಜ್ಜಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಟಾಕಿ ವ್ಯಾಪಾರವೂ ಜೋರಾಗಿವೆ. ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಬಳಸುವಂತೆ ರಾಜ್ಯ ಸರ್ಕಾರವು ಸಾಕಷ್ಟು ಅರಿವು ಮೂಡಿಸುತ್ತಿದ್ದರೂ, ಕೆಂಪು ಪಟಾಕಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇದೀಗ ಪರಿಸರಕ್ಕೆ ಹಾನಿಯುಂಟು ಮಾಡುವ ಪಟಾಕಿ ವ್ಯವಹಾರ, ಮಾರಾಟ, ಖರೀದಿ ಬಗ್ಗೆ ನಿಗಾ ಇಡಲು ಖಾಕಿ ಪಡೆ ಸಜ್ಜಾಗಿದೆ.

ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪೂರೈಕೆಯಾಗುವ ಪಟಾಕಿಗಳನ್ನು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪಟಾಕಿ ಸರಬರಾಜು ಮಾಡುವವರ ವಿರುದ್ಧ ಪೊಲೀಸರು ಇನ್ನಷ್ಟು ಬಿಗಿಯಾಗಿ ಕಣ್ಗಾವಲು ಇರಿಸಲು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದಲ್ಲೇಕಿಲ್ಲ ಪಟಾಕಿ ಉತ್ಪಾದನೆ?

ಹಸಿರು ಪಟಾಕಿ ಹೊರತುಪಡಿಸಿ ಇತರ ಪಟಾಕಿಗಳ ಮಾರಾಟ ಮಾಡುವ ಬಗ್ಗೆ ಕೆಎಸ್‌ಪಿಸಿಬಿ ಮೇಲ್ವಿಚಾರಣೆ ಮಾಡುತ್ತಿದೆ. ಪಟಾಕಿ ಉತ್ಪಾದನೆ ಮಾಡುವ ಘಟಕ ಇದ್ದರೆ ಮಾತ್ರ ಅಂತಹ ಕಡೆಗಳಿಗೆ ದಾಳಿ ನಡೆಸಿ ಅವುಗಳನ್ನು ಜಪ್ತಿ ಮಾಡಲು ಕೆಎಸ್‌ಪಿಸಿಬಿಗೆ ಅವಕಾಶಗಳಿವೆ. ಆದರೆ, ಕರ್ನಾಟಕದಲ್ಲಿ ಪಟಾಕಿ ಉತ್ಪಾದನ ಘಟಕಗಳಿಲ್ಲ. ಇಲ್ಲಿನ ವಾತಾವರಣದಲ್ಲಿ ತೇವಾಂಶ ಅಧಿಕವಾಗಿರುವ ಹಿನ್ನಲೆಯಲ್ಲಿ ಪಟಾಕಿ ಉತ್ಪಾದನೆಗೆ ಕರ್ನಾಟಕ ಸೂಕ್ತವಾಗಿಲ್ಲ. ಇಲ್ಲಿ ಪಟಾಕಿ ಉತ್ಪಾದಿಸಿದರೂ ಅದು ಸಿಡಿಸಲು ಯೋಗ್ಯವಾಗಿರುವುದಿಲ್ಲ. ಈ ಎಲ್ಲ ಕಾರಣಗಳಿಂದ ಹೊರ ರಾಜ್ಯ ಪ್ರಮುಖವಾಗಿ ತಮಿಳುನಾಡಿನಿಂದ ಹೆಚ್ಚಾಗಿ ಕರ್ನಾಟಕಕ್ಕೆ ಪಟಾಕಿಗಳು ಬರುತ್ತಿವೆ.

ಆನ್‌ಲೈನ್‌ನಲ್ಲಿ ಮಾರಿದರೂ ಕ್ರಮ

ಮಾರುಕಟ್ಟೆಗಳಲ್ಲಿ ಕೆಂಪು ಪಟಾಕಿಗಳ ಮಾರಾಟ ಮಾಡುವವರು, ಪಟಾಕಿ ಸಿಡಿಸಿರುವವರ ವಿರುದ್ಧವೂ ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆದರೆ ಆನ್‌ಲೈನ್‌ನಲ್ಲಿ ವಿವಿಧ ಕಂಪೆನಿಗಳು ಕರ್ನಾಟಕದಲ್ಲಿ ನಿಷೇಧಿಸಲಾದ ಪಟಾಕಿಗಳನ್ನು ಮಾರಾಟ ಮಾಡುವ ಆರೋಪಗಳು ಕೇಳಿ ಬಂದಿವೆ. ಇದು ಅಪರಾಧವಾಗಿದ್ದು, ಸೈಬರ್‌ ಕ್ರೈಂ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ರಾಯಚೂರು, ಉಡುಪಿ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಪೊಲೀಸರ ಕಣ್ತಪ್ಪಿಸಿ ನಿಷೇಧಿತ ಕೆಂಪು ಪಟಾಕಿ ಮಾರಾಟ ಮಾಡಲು ವ್ಯಾಪಾರಿಗಳು ಮುಂದಾಗಿರುವ ಆರೋಪ ಕೇಳಿ ಬಂದಿದೆ.

ತಮಿಳುನಾಡಿನಿಂದ ಅತ್ಯಧಿಕ ಪಟಾಕಿ ರಾಜ್ಯಕ್ಕೆ ರವಾನೆ

ಪಟಾಕಿ ಎಂದರೆ ದೇಶದಲ್ಲೇ ಮೊದಲ ಹೆಸರು ಕೇಳಿಬರುವುದು ಕರ್ನಾಟಕದ ನೆರೆ ರಾಜ್ಯವಾಗಿರುವ ತಮಿಳುನಾಡು. ತಮಿಳುನಾಡಿನಿಂದ ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕಕ್ಕೆ ದೊಡ್ಡ ಪ್ರಮಾಣದ ಪಟಾಕಿ ಬರುವ ಸಾಧ್ಯತೆಗಳಿವೆ. ತಮಿಳುನಾಡಿನ ಶಿವಕಾಶಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನಿಷೇಧಿತ ಕೆಂಪು ಪಟಾಕಿ ತಯಾರಿಸಲಾಗಿವೆ ಎಂದು ತಿಳಿದು ಬಂದಿದೆ. ಇದೇ ಪಟಾಕಿಗಳು ರಿಯಾಯಿತಿ ದರದಲ್ಲಿ ರಾಜ್ಯಕ್ಕೆ ಕಾಲಿಡುವ ಸಾಧ್ಯತೆಗಳಿವೆ. ಏಕೆಂದರೆ ತಮಿಳುನಾಡಿನಿಂದ ಕರ್ನಾಟಕ, ಆಂಧ್ರ, ಕೇರಳಕ್ಕೆ ಹೆಚ್ಚಿನ ಸಾಗಾಣಿಕೆ ವೆಚ್ಚ ತಗಲುವುದಿಲ್ಲ. ಹೀಗಾಗಿ ಇಲ್ಲಿನ ಪಟಾಕಿಗಳು ನೆರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತವೆ ಎನ್ನುತ್ತಾರೆ ಪರಿಸರ ತಜ್ಞರು.

ಹಸಿರು ಪಟಾಕಿ ಖಾತ್ರಿ ಮಾಡಿಕೊಳ್ಳುವುದು ಹೇಗೆ?

ಗ್ರಾಹಕರು ತಾವು ಕೊಳ್ಳುವ ಪಟಾಕಿಗಳು ಹಸಿರು ಪಟಾಕಿ ಹೌದೇ? ಇಲ್ಲವೇ? ಎಂಬುದನ್ನು ಖಾತರಿಪಡಿಸಿಕೊಳ್ಳಲು ಪಟಾಕಿ ಪ್ಯಾಕ್‌ನ ಮೇಲಿರುವ ಕ್ಯೂಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡುವ ಮೂಲಕ ಅರಿತುಕೊಳ್ಳಬಹುದಾಗಿದೆ.

“ದೀಪದಿಂದ ದೀಪ ಹಚ್ಚಿ ದೀಪಾವಳಿ ಆಚರಿಸಬೇಕೇ ಹೊರತು ಪಟಾಕಿ ಹಚ್ಚಿ ಅಲ್ಲ. ಪಟಾಕಿ ಹಚ್ಚಲೇ ಬೇಕು ಎಂದಾದರೆ ಹಸಿರು ಪಟಾಕಿ ಮಾತ್ರ ಸಿಡಿಸಿ. 125 ಡೆಸಿಬಲ್‌ಗಿಂತ ಹೆಚ್ಚು ತೀವ್ರತೆಯ ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿ ಸಿಡಿಸಬಾರದು. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅರಣ್ಯ ಸಚಿವ ಈಶ್ವರ್ ಖoಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

38 minutes ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

3 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

4 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

17 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

23 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago