ನಿಷೇಧಿತ ಮಾಲಿನ್ಯಕಾರಕ ಪಟಾಕಿ ಮಾರಾಟ, ಬಳಕೆ ನಿಷೇಧ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿಂದು ದೀಪಾವಳಿ ಹಬ್ಬದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಮಾಲಿನ್ಯಕಾರಕ , ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂಬ ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳು (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು ಎಂದರು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಿ ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ ಯಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೊಲು ಹಾಕಿಕೊಳ್ಳಬೇಕು, ಸಾಗಾಟ ಮಾಡುವ ವಾಹನವನ್ನು ವಶಪಡಿಸಿಕೊಳ್ಳಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಪಟಾಕಿ ಅಂಗಡಿಗಳನ್ನು ತೆರೆದ ಪ್ರದೇಶದಲ್ಲಿ ಮತ್ತು ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ಮತ್ತು ಅಂಗಡಿಗಳ ಮುಂದೆ ಸಾರ್ವಜನಿಕರು ಹೆಚ್ಚು ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು. ಅಗ್ನಿಶಾಮಕ ದಳದವರೂ ಜಾಗೃತರಾಗಿರಿ ಎಂದರು.

ಪಟಾಕಿಗಳನ್ನು ಹಗಲು ಸಮಯದಲ್ಲಿ ಮಾತ್ರ ಮಾರಾಟ ಮಾಡಬೇಕು. ಪಟಾಕಿ ಅಂಗಡಿಗಳ ಮಾಲೀಕರು ಯಾವುದೇ ಕಾರಣಕ್ಕೂ ಪಾಲಕರ ಸಮಕ್ಷಮ ಇಲ್ಲದೆ 18 ವರ್ಷದೊಳಗಿನ ಮಕ್ಕಳಿಗೆ ಪಟಾಕಿ ನೀಡುವಂತಿಲ್ಲ ಈ ಬಗ್ಗೆ ಮಾರಾಟಗಾರರ ತಿಳುವಳಿಕೆ ನೀಡಿ ಎಂದು ಪೊಲೀಸ್, ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಎಂದು ಜಿಲ್ಲಾಧಿಕಾರಿ ಕೋರಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗ ಶ್ರೀ, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗೇಶ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಮಟ್ಟದ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

6 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

15 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

17 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

18 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

2 days ago